ಬೆಂಗಳೂರು: ಅಧಿಕಾರ ಹಸ್ತಾಂತರ ಕುರಿತಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆದಿರುವ ಬೆನ್ನಲ್ಲೇ ಡಿಸಿಎಂ ಡಿ ಕೆ ಶಿವಕುಮಾರ್ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಜೊತೆ ಮೈಸೂರಿನಲ್ಲಿ ಪ್ರತ್ಯೇಕವಾಗಿ ಮಾತುಕತೆ ನಡೆಸಿ ಗಮನ ಸೆಳೆದಿದ್ದಾರೆ. ಈ ಮಾತುಕತೆಯ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿರುವ ಅವರು ಜನವರಿ 16ರಂದು ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರ ಜೊತೆಗೆ ರಾಜ್ಯ ಕಾಂಗ್ರೆಸ್ಸಿನ ವಿದ್ಯಮಾನಗಳು ಮನರೇಗಾ ಪರವಾಗಿ ಜನಾಂದೋಲನ ಮೂಡಿಸಲು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಹಲವು ಕಾರ್ಯಕ್ರಮಗಳ ಬಗ್ಗೆ ಅವರ ಗಮನ ಸೆಳೆದಿದ್ದೇನೆ. ಯಾವ ವಿಷಯಗಳ ಕುರಿತು ನಮ್ಮಿಬ್ಬರ ನಡುವೆ ಮಾತುಕತೆ ನಡೆದಿದೆ ಎಂಬ ವಿಷಯವನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದರು.
ರಾಹುಲ್ ಗಾಂಧಿ ಅವರ ಜೊತೆಗೆ ಮಾತನಾಡುವ ಸಮಯದಲ್ಲಿ ನಾನು ಯಾವ ಸಂದೇಶವನ್ನು ರವಾನಿಸಿಲ್ಲ ಮಾಧ್ಯಮಗಳು ಈ ಬಗ್ಗೆ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ನಡುವೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಾಕಿರುವ ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿದ ಅವರು ಇದು ಒಕ್ಕಲಿಗ ಉದ್ಯಮಿಗಳ ಸಮಾವೇಶದಲ್ಲಿ ಮಾತನಾಡುವಾಗ ಹೇಳಿದ ವಾಕ್ಯವಾಗಿದೆ ನನ್ನ ಅನುಭವವನ್ನು ಸಮುದಾಯದ ಉದ್ಯಮಿಗಳಿಗೆ ವಿವರಿಸುವಾಗ ತಿಳಿಸಿದ ಶಬ್ದ ಇದರ ಬಗ್ಗೆ ವಿಶೇಷ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದರು.




