ಬೆಂಗಳೂರು: ರಾಜಕೀಯ ಬೆಳವಣಿಗೆಗಳ ನಡುವೆ ಡಿ.ಕೆ.ಶಿವಕುಮಾರ್ ತಮಿಳುನಾಡಿನ ಕುಂಭಕೋಣಂಗೆ ತೆರಳಿ ಪ್ರತ್ಯೇಂಕರ ಹೋಮದಲ್ಲಿ ಭಾಗಿಯಾಗಿದರು. ಹೆಲಿಕಾಪ್ಟರ್ನಲ್ಲಿ ಪತ್ನಿ ಉಷಾ ಅವರೊಂದಿಗೆ ತೆರಳಿ ಶ್ರೀ ಮಹಾ ಪ್ರತ್ಯಂಗಿರ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಹೋಮ ಚಟುವಟಿಕೆಯಲ್ಲಿ ಭಾಗವಹಿಸಿದ್ದರು. ವೈಕುಂಠ ಏಕಾದಶಿಗೂ ಮುನ್ನ ಅವರು ದೇವಸ್ಥಾನಗಳ ದರ್ಶನಕ್ಕೆ ತೆರಳಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಪ್ರತ್ಯಂಗಿರಾ ದೇವಿ ಶತ್ರು ಸಂಹಾರಕ್ಕೆ ಹೆಸರಾದ ದೇವಿ ಎಂಬ ಪ್ರತೀತಿಯಿದೆ. ಹೀಗೆ ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತ ಅವರು ರಾಜಕೀಯವಾಗಿ ತೀವ್ರ ಸಂಕಷ್ಟದಲ್ಲಿದ್ದ ಸಮಯದಲ್ಲಿ ನಿರಂತರವಾಗಿ ಪ್ರತ್ಯಂಗಿರಾ ದೇವಿಯ ಆರಾಧನೆಯಲ್ಲಿ ತೊಡಗಿದ ಪರಿಣಾಮ ಅವರು ಮತ್ತೆ ರಾಜಕೀಯವಾಗಿ ಹೆಚ್ಚಿನ ಪ್ರವರ್ಧಮಾನಕ್ಕೆ ಬಂದಿದ್ದರು ಎಂದು ನಂಬಲಾಗಿದೆ. ಸತತವಾಗಿ ಎರಡು ಬಾರಿ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾಗಿದ್ದರು ಎಂದು ಹೇಳಲಾಗುತ್ತಿದೆ.
ಪ್ರತ್ಯಂಗಿರಾ ದೇವಿಯ ಆರಾಧನೆಯಿಂದ ಜಯಲಲಿತಾ ಅವರಿಗೆ ರಾಜಕೀಯವಾಗಿ ಸಾಕಷ್ಟು ಲಾಭ ಉಂಟಾಗಿತ್ತು ಎಂಬ ಮಾತುಗಳ ಹಿನ್ನೆಲೆಯಲ್ಲಿ ಪ್ರಮುಖ ರಾಜಕಾರಣಿಗಳು ಇದೀಗ ಪ್ರತ್ಯಂಗಿರಾ ದೇವಿಯ ಆರಾಧನೆಯಲ್ಲಿ ತೊಡಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಡಿ ಕೆ ಶಿವಕುಮಾರ್ ಕೂಡ ಪತ್ನಿ ಜೊತೆ ಅಲ್ಲಿಗೆ ತೆರಳಿ ವಿಶೇಷ ಪೂಜೆ ನೆರವೇರಿಸಿದ್ದಾರೆ.




