ಬೆಂಗಳೂರು: ವಿಧಾನಸಭೆ ಚುನಾವಣೆಯ ಮುಗಿಯುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಕೇಳಿ ಬಂದಿದ್ದ ಮಂತ್ರಿಮಂಡಲ ಪುನರ್ ರಚನೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ವಿದ್ಯಮಾನಗಳಿಗೆ ಹೈಕಮಾಂಡ್ ತಡೆ ನೀಡಿದೆ.
- ಪ್ರಕಾಶ್ ರಾಜ್ ವಿಡಿಯೋಗೆ ವಿವಾದಾತ್ಮಕ ಪಠ್ಯ ಸೇರಿಸಿ ವೈರಲ್: ವಾಸ್ತವವೇನು?
- ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ವಿರುದ್ಧ ಪ್ರತಿಭಟನೆ
- ತಪ್ಪು ಮುಚ್ಚಿಕೊಳ್ಳಲು ಧರ್ಮದ ಲೇಪನ ಹಚ್ಚುವ ಬಿಜೆಪಿ ನಾಯಕರು
- ರಾಷ್ಟ್ರಪಿತ ಗಾಂಧೀಜಿ ಹಾಗೂ ಮಾಜಿ ಪ್ರಧಾನಿಗಳ ಹತ್ಯೆ ಸಮರ್ಥನೆ
- ಚುನಾವಣಾ ಆಯೋಗದ ಮೇಲೆ ಕಾಂಗ್ರೆಸ್ ನಾಯಕರಿಂದ ರಾಜಕೀಯ ಒತ್ತಡ: ಆರ್.ಅಶೋಕ
ಕೋರ್ಟ್ ಆದೇಶದ ಅನ್ವಯ ಯಾವುದೇ ಸಮಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಯಾಗಬಹುದು. ರಾಜ್ಯ ಸರ್ಕಾರ ಬರುವ ಏಪ್ರಿಲ್ ನಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಸೂಚನೆ ನೀಡಿದೆ.
ಉಪಚುನಾವಣೆ ಗೆಲುವಿನ ಯಶಸ್ಸಿನಿಂದ ಬೀಗುತ್ತಿರುವ ಡಿ ಕೆ ಶಿವಕುಮಾರ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ತಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡಬೇಕು ಎಂದು ಕೋರಿದರು.
ಕಳೆದ ಐದು ವರ್ಷಗಳಿಂದ ನಾನು ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಪಕ್ಷದ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುವಲ್ಲಿ ಶ್ರಮಿಸಿದ್ದು, ಇದೀಗ ಡಿಸಿಎಂ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಎರಡು ಹುದ್ದೆಗಳ ಕಾರ್ಯಭಾರದ ಒತ್ತಡ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಭೇಟಿಯ ಸಮಯದಲ್ಲಿ ಯಾವುದೇ ಮಾತನಾಡದ ಹೈಕಮಾಂಡ್ ನಾಯಕರು ನಂತರ ನಡೆದ ಎಐಸಿಸಿ ಸಭೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿಯುವವರೆಗೆ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂಬ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಪಕ್ಷಕ್ಕೆ ಹೊಸ ಅಧ್ಯಕ್ಷರು ನೇಮಕವಾದರೆ ಅವರು ಚುನಾವಣೆ ಕಾರ್ಯತಂತ್ರ ರೂಪಿಸುವುದು ಕಷ್ಟವಾಗಲಿದೆ. ಈಗಾಗಲೇ ಪಕ್ಷದ ಅಧ್ಯಕ್ಷರಾಗಿ ಯಶಸ್ವಿಯಾಗಿರುವ ಶಿವಕುಮಾರ್ ಈ ಹುದ್ದೆಯಲ್ಲಿ ಮತ್ತಷ್ಟು ಕಾಲ ಮುಂದುವರೆದಿದ್ದೆ ಆದಲ್ಲಿ ಸ್ಥಳೀಯ ಸಂಸ್ಥೆಗಳ ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ ಎಂದು ವಿವರಿಸಿದರು ಎಂದು ಮೂಲಗಳಿಂದ ತಿಳಿದುಬಂದಿದೆ.




