ಬೆಂಗಳೂರು: ಅಧಿಕಾರ ಹಸ್ತಾಂತರ ಸೇರಿದಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಹಲವು ಬೆಳವಣಿಗೆ ನಡೆಯುತ್ತಿರುವಾಗಲೇ ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡುವ ನೆಪದಲ್ಲಿ ದೆಹಲಿಗೆ ಆಗಮಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್ ತೆರೆಮರೆಯಲ್ಲಿ ನಡೆಸಿರುವ ರಾಜಕೀಯ ಚಟುವಟಿಕೆಗಳು ಗಮನ ಸೆಳೆದಿವೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ವಿಧಾನಸಭೆ ಚುನಾವಣೆ ಮುಗಿದ ನಂತರ ಹೈಕಮಾಂಡ್ ನೇತೃತ್ವದಲ್ಲಿ ನಡೆದ ಅಧಿಕಾರ ಹಸ್ತಾಂತರದ ಸಂಧಾನ ಸೂತ್ರ ಜಾರಿಗೆ ತರುವಂತೆ ಒತ್ತಡ ಹೇರುತ್ತಿರುವ ಡಿ ಕೆ ಶಿವಕುಮಾರ್, ಇದಕ್ಕಾಗಿ ಸದ್ದುಗದ್ದಲವಿಲ್ಲದೆ ತಮ್ಮ ಪರ ಬೆಂಬಲ ಕ್ರೋಡೀಕರಿಸಿಕೊಳ್ಳಲು ಮುಂದಾಗಿದ್ದಾರೆ.
ದೆಹಲಿಯ ತಮ್ಮ ಖಾಸಗಿ ನಿವಾಸದಲ್ಲಿ ಕಳೆದ ರಾತ್ರಿ ವಾಸ್ತವ್ಯ ಹೂಡಿದ್ದ ಅವರು, ಅಲ್ಲಿಂದ ನೇರವಾಗಿ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರ ನಿವಾಸಕ್ಕೆ ತೆರಳಿದರು. ಅಲ್ಲಿ ಅನಾರೋಗ್ಯ ನಿಮಿತ್ತ ತಂಗಿರುವ ಕಾಂಗ್ರೆಸ್ಸಿನ ಹಿರಿಯ ನಾಯಕಿ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಸೋನಿಯಾ ಗಾಂಧಿ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಅವರನ್ನು ಭೇಟಿಯಾದ ಡಿ ಕೆ ಶಿವಕುಮಾರ್, ರಾಜ್ಯದಲ್ಲಿ ನಡೆದಿರುವ ಎಲ್ಲ ವಿದ್ಯಮಾನಗಳನ್ನು ತಿಳಿಸಿ ತಮ್ಮ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.
ಲೋಕಸಭೆಯ ವಿಪಕ್ಷ ನಾಯಕರ ರಾಹುಲ್ ಗಾಂಧಿ, ಕೆ ಸಿ ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರೊಂದಿಗೆ ರಾಜ್ಯದ ವಿದ್ಯಮಾನಗಳ ಕುರಿತಂತೆ ಸಿಎಂ ಜೊತೆಗೆ ಸಭೆ ನಡೆಸಲಿದ್ದು ಅದಕ್ಕೂ ಮುನ್ನ ಸೋನಿಯಾ ಗಾಂಧಿ ಅವರ ಜೊತೆ ಶಿವಕುಮಾರ್ ನಡೆಸಿರುವ ಮಾತುಕತೆ ಕುತೂಹಲಕ್ಕೆ ಕಾರಣವಾಗಿದೆ.




