ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುದೀರ್ಘ ಸಮಾಲೋಚನೆ ನಡೆಸಿದ ಡಿ ಕೆ ಶಿವಕುಮಾರ್
ಬೆಂಗಳೂರು: ಆಡಳಿತಾರೂಢ ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿವೆ. ಕೇರಳದ ವಯನಾಡಿಗೆ ತೆರಳುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಮೈಸೂರಿಗೆ ಆಗಮಿಸುತ್ತಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಇದರ ನಡುವೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಡಿ ಕೆ ಶಿವಕುಮಾರ್, ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುದೀರ್ಘ ಸಮಾಲೋಚನೆ ನಡೆಸಿದರು.
ನಿನ್ನೆ ಬೆಳಗ್ಗೆಯೇ ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸಕ್ಕೆ ತೆರಳಿದ ಡಿ ಕೆ ಶಿವಕುಮಾರ್ ಅವರು ಸುದೀರ್ಘ ಒಂದೂವರೆ ಗಂಟೆಗಳ ಕಾಲ ಅವರ ಜೊತೆ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಆನಂತರ ಈ ಇಬ್ಬರು ನಾಯಕರು ಒಂದೇ ಕಾರಿನಲ್ಲಿ ಕಲ್ಬುರ್ಗಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೋದರು. ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ಸಿನಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಹೈಕಮಾಂಡ್ ತನಗೆ ಬೇಕು ಎನಿಸಿದಾಗ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಳ್ಳುತ್ತದೆ ಎಂದರು.
ಸದ್ಯ ಈ ನಾಯಕರನ್ನು ದೆಹಲಿಗೆ ಕರೆಸಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ತಮ್ಮ ಪಕ್ಷದ ನಾಯಕರನ್ನು ದೆಹಲಿಗೆ ಕರೆಸಿಕೊಳ್ಳಲು ಯಾರ ಅನುಮತಿಯೂ ಬೇಕಾಗಿಲ್ಲ. ತನಗೆ ಬೇಕೆನಿಸಿದಾಗ ಅವರನ್ನು ದೆಹಲಿಗೆ ಕರೆಸಿಕೊಳ್ಳಲಿದೆ ಎಂದರು.




