ತಿರುವಣ್ಣಾಮಲೈ: ರಾಜ್ಯದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಸೇರಿದಂತೆ ಹಲವಾರು ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಡೆ ಕುತೂಹಲ ಮೂಡಿಸಿದೆ. ತಮಿಳುನಾಡಿನ ತಿರುವಣ್ಣಾಮಲೈಗೆ ತೆರಳಿದ ಅವರು ಇಲ್ಲಿನ ಪುರಾಣ ಪ್ರಸಿದ್ಧ ಅರುಣಾಚಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಮುಂಚಿತವಾಗಿ ಈ ದೇವಾಲಯಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಉತ್ತಮ ಆಡಳಿತ ಮಾಡುವ ಶಕ್ತಿ ದೊರೆಯಲಿ ಮತ್ತು ಸಮೃದ್ಧಿಯಾಗಿ ಮಳೆ ಬೀಳಲಿ ಎಂದು ಪ್ರಾರ್ಥಿಸಿದ್ದೆ. ಈ ಕಾರಣಕ್ಕೆ ಮತ್ತೆ ದೇವರ ದರ್ಶನ ಮಾಡಿದೆ. ಎಲ್ಲರ ಒಳಿತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದೆ ಎಂದರು.
ಈ ದೇವಾಲಯ ಅತ್ಯುತ್ತಮ ವಾಸ್ತುಶಿಲ್ಪದಿಂದ ಕೂಡಿದ್ದು, ಸುಂದರವಾಗಿದೆ. ನಮ್ಮ ನೆಲದ ಶಿಲ್ಪಿಗಳು ಒಂದು ಸಾವಿರ ವರ್ಷಗಳ ಹಿಂದೆಯೇ ಅದ್ಬುತ ಕೈಚಳಕ ತೋರಿಸಿದ್ದಾರೆ ಎಂದರು.
ಕಳೆದ ವರ್ಷಕ್ಕೆ ಹೋಲಿಸಿದರೆ, ದೇವಸ್ಥಾನವನ್ನು ತಮಿಳುನಾಡು ಸರ್ಕಾರ ಅತ್ಯುತ್ತಮವಾಗಿ ಅಭಿವೃದ್ಧಿಗೊಳಿಸಿದೆ. ಇದು ನನಗೆ ಹೆಚ್ಚು ಸಂತೋಷವನ್ನು ನೀಡಿತು ಎಂದರು.




