ಬೆಂಗಳೂರು: ನಿಗದಿತ ಆದಾಯ ಮೂಲ ಮೀರಿ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಪಾಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಡಿಸಿಎಂ ಡಿ ಕೆ ಶಿವಕುಮಾರ್ ಲೋಕಾಯುಕ್ತ ಕಚೇರಿಗೆ ಹಾಜರಾಗಿ ಹೇಳಿಕೆ ಸಲ್ಲಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿರುವ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಈ ಬಗ್ಗೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಶಿವಕುಮಾರ್ ಅವರಿಗೆ ಸೂಚನೆ ನೀಡಿತು. ಈ ಹಿನ್ನೆಲೆಯಲ್ಲಿ ಅವರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ವಿವರ ಸಲ್ಲಿಸಿದರು.
ಲೋಕಾಯುಕ್ತ ಪೊಲೀಸ್ ತಮಗೆ ನೀಡಿದ್ದ ಸಮನ್ಸ್ ಅವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಸಭೆಯ ಮಧ್ಯದಲ್ಲೇ ಎದ್ದು ಬಂದ ಶಿವಕುಮಾರ್ ಅವರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ಡಿವೈಎಸ್ಪಿ ಸತೀಶ್ ಮುಂದೆ ಹೇಳಿಕೆ ಸಲ್ಲಿಸಿದರು.
ಡಿ ಕೆ ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣವನ್ನು ಈ ಹಿಂದೆ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಆಸ್ತಿತ್ವಕ್ಕೆ ಬಂದ ನಂತರ ಸಿಬಿಐಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದು ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಲಾಗಿತ್ತು.




