ಡಿ ಕೆ ಶಿವಕುಮಾರ್ ಜನವರಿ 6 ಅಥವಾ 9ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತ: ಇಕ್ಬಾಲ್ ಹುಸೇನ್

10 months ago

ಬೆಂಗಳೂರು: ಅಧಿಕಾರ ಹಸ್ತಾಂತರ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಇನ್ನೂ ಕೂಡ ಹಗ್ಗ ಜಗ್ಗಾಟ ಮುಂದುವರೆದಿದೆ. ಡಿಸಿಎಂ ಡಿ ಕೆ ಶಿವಕುಮಾರ್ ಜನವರಿ 6 ಅಥವಾ 9ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತ ಎಂದು ಅವರ ಆಪ್ತ ಹಾಗೂ ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಗೆ ರಾಜ್ಯ ಕಾಂಗ್ರೆಸ್ಸಿನ ಎಲ್ಲ ವಿದ್ಯಮಾನಗಳ ಅರಿವಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಆಗುವ ಸಮಯದಲ್ಲಿ ಆದ ಒಪ್ಪಂದದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ. ಜನವರಿ ಆರು ಅಥವಾ ಒಂಬತ್ತರಂದು ಈ ಬೆಳವಣಿಗೆ ನಡೆಯುವುದು 200ರಷ್ಟು ಖಚಿತ ಎಂದು ಹೇಳಿದರು.

ಈ ವಿಚಾರದಲ್ಲಿ ಯಾರನ್ನು ಯಾವುದೇ ರೀತಿಯ ಗೊಂದಲಗಳು ಇಲ್ಲ. ನಾವು ನಮ್ಮ ನಾಯಕರಾದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಬಯಸುತ್ತಿದ್ದು, ಅದು ಈಡೇರುವ ಸಮಯ ಬಂದಿದೆ ಎಂದು ತಿಳಿಸಿದರು.

Leave a Reply