ಬೆಂಗಳೂರು: ಅಧಿಕಾರ ಹಸ್ತಾಂತರ ಕುರಿತಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿ ಕೆ ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಪದಶಕ್ತಿ, ವಿಶ್ವಶಕ್ತಿ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಹಲವಾರು ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯ ಸಮಯದಲ್ಲಿ ಅಧಿಕಾರ ಹಂಚಿಕೆ ಕುರಿತಂತೆ ಒಪ್ಪಂದ ಆಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಮಾತನ್ನು ಗ್ಯಾರೆಂಟಿಯಾಗಿ ಉಳಿಸಿಕೊಳ್ಳುತ್ತಾರೆ ಎಂದು ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು.
ಅದರ ಬೆನ್ನಲ್ಲೇ ಡಿ ಕೆ ಶಿವಕುಮಾರ್ ಹಾಕಿರುವ ಪದಶಕ್ತಿ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂಬ ಪೋಸ್ಟ್ ಸಿದ್ದರಾಮಯ್ಯ ಅವರಿಗೆ ಕೊಟ್ಟ ಮಾತು ನೆನಪಿಸಿರುವಂತೆ ಇದೆ ಎಂದು ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ.
ಡಿ ಕೆ ಶಿವಕುಮಾರ್ ಅವರು ತಾವು ಸರಿರಾತ್ರಿಯಲ್ಲೂ ಕೆಲಸ ಮಾಡುತ್ತಿರುವುದು, ಅರ್ಧ ರಾತ್ರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿರುವ ಫೋಟೋವನ್ನು ಲಗತ್ತಿಸಿ ವರ್ಡ್ ಪವರ್ ಈಸ್, ವರ್ಲ್ಡ್ ಪವರ್ ಎಂದು ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆ ಸಮಾರಂಭದಲ್ಲೂ ಕೂಡ ಕೊಟ್ಟ ಮಾತಿನ ಕುರಿತಾಗಿ ಡಿ ಕೆ ಶಿವಕುಮಾರ್ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿತ್ತು.




