ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಆರ್ ಎಸ್ ಎಸ್ ಧ್ಯೇಯಗೀತೆ ನಮಸ್ತೆ ಸದಾ ವತ್ಸಲೇ ಹಾಡಿದ ವಿಚಾರ ಇದೀಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಕೆ ಎನ್ ರಾಜಣ್ಣ, ಈ ಹೇಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಅವರು ಡಿ ಕೆ ಶಿವಕುಮಾರ್ ಅವರ ಕ್ಷಮೆಯಾಚನೆಗೆ ಆಗ್ರಹಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಬಿಜೆಪಿಯವರು ಇಂತಹ ಹೇಳಿಕೆ ಸಹಜವಾಗಿ ಸಮರ್ಥಿಸಿಕೊಳ್ಳುತ್ತಾರೆ. ಆದರೆ, ಕಾಂಗ್ರೆಸ್ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದರು.
ಆರ್‌ಎಸ್‌ಎಸ್ ಅನ್ನು ದೇಶದಲ್ಲಿ ಮೂರು ಬಾರಿ ನಿಷೇಧ ಮಾಡಲಾಗಿತ್ತು. ರಾಷ್ಟ್ರಪಿತ ಮಹಾತ್ಮ ಗಾಂಧಿ ಕೊಂದವರು ಆರ್‌ಎಸ್‌ಎಸ್‌ನವರು. ಇಂತಹ ಸಿದ್ಧಾಂತವನ್ನು ಕಾಂಗ್ರೆಸ್ ಎಂದಿಗೂ ಒಪ್ಪಲು ಸಾಧ್ಯವಿಲ್ಲ. ಹೀಗಾಗಿ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಡಿ.ಕೆ.ಶಿವಕುಮಾರ್ ಡಿಸಿಎಂ ಆಗಿ ಹೇಳಿದ್ರೆ ನಮ್ಮದು ಅಭ್ಯಂತರ ಇಲ್ಲ. ಸರ್ಕಾರ ಎಲ್ಲರ ಸ್ವತ್ತು. ಅದರಲ್ಲಿ ಕೆಟ್ಟವರು, ಒಳ್ಳೆಯವರು ಎಲ್ಲಾರೂ ಇರುತ್ತಾರೆ. ಆರ್ ಎಸ್ಎಸ್ ಅನ್ನು ಈ ದೇಶದಲ್ಲಿ ಮೂರು ಬಾರಿ ಈಗಾಗಲೇ ನಿಷೇಧ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಡಿಸಿಎಂ ಆಗಿ ಸಂಘದ ಪ್ರಾರ್ಥನೆ ಮಾಡಿದರೆ ನಮ್ಮದೇನು ಅಭ್ಯಂತರವಿಲ್ಲ. ಯಾಕೆಂದರೆ ಸರ್ಕಾರ ಎಂಬುದು ಒಂದು ಪಕ್ಷದ್ದಲ್ಲ, ಇಡೀ ಏಳು ಕೋಟಿ ಕರ್ನಾಟಕ ಜನತೆಯ ಸರ್ಕಾರ. ಅದರಲ್ಲಿ ಆರ್ಎಸ್ಎಸ್ನವರೂ ಇದ್ದಾರೆ, ಜಮಾತೆ ಇಸ್ಲಾಮಿ ಅವರೂ ಇದ್ದಾರೆ. ತಾಲಿಬಾನಿಗಳೂ ಇದ್ದಾರೆ ಎಂದು ವ್ಯಂಗ್ಯವಾಡಿದರು.
ಡಿ ಕೆ ಶಿವಕುಮಾರ್ ಅವರಿಗೆ ಕೃಷಿಕರು, ವ್ಯಾಪಾರಸ್ಥರು, ಉದ್ಯೋಗಸ್ಥರು, ರಾಜಕಾರಣಿ ಎಂಬ ಹಲವು ಮುಖಗಳಿವೆ. ಅವರು ಗಾಂಧಿ ಕೊಂದ ಸಂಘಟನೆ ಬಗ್ಗೆ ಹೀಗೆ ಹೇಳಿದ್ದಾರೆ. ಇದು ಯಾರಿಗಾದರೂ ಸಂದೇಶ ಕೊಡಲು ಹೇಳಿರಬಹುದು ಆ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ಅವರು ಪಕ್ಷದ ಅಧ್ಯಕ್ಷರಾಗಿ ಪಕ್ಷದ ನೆಲೆಗಟ್ಟಿನಲ್ಲಿ ಇದನ್ನು ಹೇಳಬಾರದು. ಈಗ ಹಾಗೆ ಹೇಳಿದ್ದಾರೆ. ಅದಕ್ಕಾಗಿ ಅವರು ಕ್ಷಮೆ ಕೇಳಲೇಬೇಕು ಎಂದರು.




