ಮೂಲ ಒಪ್ಪಂದ ಚೌಕಟ್ಟು ಉಲ್ಲಂಘನೆ, ಒಪ್ಪಂದ ವ್ಯಾಪ್ತಿ ಮೀರಿ ಭೂ ಕಬಳಿಕೆ, ಬಿಎಂಐಸಿ ಕ್ರಿಯಾ ಒಪ್ಪಂದದ ಉಲ್ಲಂಘನೆ, ಹೆಚ್ಚುವರಿ ಭೂಮಿ ಕಬಳಿಕೆ, ರಸ್ತೆ ನಿರ್ಮಾಣದ ಹೆಸರಿನಲ್ಲಿ ಪಡೆದ ಭೂಮಿಗಳ ರಿಯಲ್ ಎಸ್ಟೇಟ್ ಮಾರಾಟ ,ಕಾನೂನು ಬಾಹಿರ ಕ್ರಮ, ದೌರ್ಜನ್ಯ, ದಬ್ಬಾಳಿಕೆ, ಭ್ರಷ್ಟಾಚಾರ ಮೂಲಕ ರೈತರ ಭೂ ಸ್ವಾಧೀನ ಮುಂತಾದ ಹತ್ತು ಹಲವು ಅಕ್ರಮಗಳಿಗಾಗಿ ಸುಪ್ರೀಂ ಕೋರ್ಟ್ ಹಾಗೂ ಸದನ ಸಮಿತಿಯಿಂದ ಛೀಮಾರಿಗೆ ಒಳಗಾಗಿರುವ ನೈಸ್ ಕಂಪನಿ ಪರ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ವಕಾಲತ್ತು ರೈತ ದ್ರೋಹ ಹಾಗೂ ಅಕ್ರಮ ಕೂಟದ ಬಹಿರಂಗ ಪ್ರದರ್ಶನ ಎಂದು ಕರ್ನಾಟಕ ಪ್ರಾಂತ ರೈತ ಸಂಘ(KPRS) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಬೆಂಗಳೂರು – ಮೈಸೂರು ಮಧ್ಯೆ ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ ನೈಸ್ ಯೋಜನೆ ಅಪ್ರಸ್ತುತವಾಗಿದೆ. ಯೋಜನೆ ಕಾರ್ಯಗತ ಆಗದೇ ಇದ್ದರೂ ಮೂವತ್ತು ವರ್ಷಗಳ ಹಿಂದಿನ ಕೆಐಎಡಿಬಿ ಭೂ ಸ್ವಾಧೀನವನ್ನು ಉಳಿಸಿಕೊಂಡು ಬರುತ್ತಿರುವುದು ಅನ್ಯಾಯದ ಪರಮಾವಧಿ. ನೈಸ್ ಕಂಪನಿಯ ಭೂ ಸ್ವಾಧೀನದಿಂದ ಈ ಯೋಜನೆ ವ್ಯಾಪ್ತಿಯ ರೈತರು ಅಪಾರ ಯಾತನೆ ಮತ್ತು ಸಂಕಟವನ್ನು ಅನುಭವಿಸುತ್ತಿದ್ದಾರೆ. ಅನ್ಯಾಯದ ಭೂ ಕಬಳಿಕೆ ವಿರುದ್ಧ ರಕ್ಷಣೆಗಾಗಿ ಕೋರ್ಟ್ ಕಛೇರಿಗಳಿಗೆ ಅಲೆದು ಲಕ್ಷಾಂತರ ರೂ.ಗಳನ್ನು ಕಳೆದುಕೊಂಡಿದ್ದಾರೆ. ಇಂತಹ ರೈತರ ನೆರವಿಗೆ ನ್ಯಾಯಯುತವಾಗಿ ನಿಲ್ಲಬೇಕಾದ ಸರ್ಕಾರದ ಉಪ ಮುಖ್ಯಮಂತ್ರಿಗಳು ಕಪ್ಪು ಪಟ್ಟಿಯಲ್ಲಿ ಇರಬೇಕಾದ ಹಗರಣ – ಭ್ರಷ್ಟಾಚಾರದ ಕುಖ್ಯಾತಿಗೆ ಒಳಗಾದ ನೈಸ್ ಕಂಪನಿ ಪರವಾಗಿ ವಕಾಲತ್ತು ವಹಿಸುವುದು ಬೇಜವಾಬ್ದಾರಿ ಮತ್ತು ಅವರ ಹುದ್ದೆಗೆ ಯೋಗ್ಯವಲ್ಲದ್ದು, ಮಾತ್ರವಲ್ಲ ಸರ್ಕಾರದ ಕಾರ್ಪೊರೇಟ್ ಲೂಟಿ ಪರ ನೀತಿಗಳಿಗಿಂತ ತಾನು ಮತ್ತಷ್ಟು ಮುಂದೆ ಇದ್ದೇನೆ ಎಂದು ತನ್ನನ್ನು ಬಿಂಬಿಸಿಕೊಳ್ಳುವ ಹೇಳಿಕೆಯೂ ಕೂಡ ಆಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸುತ್ತದೆ.
ತಮ್ಮ ಮಾತನ್ನು ಕೂಡಲೇ ವಾಪಸ್ಸು ಪಡೆದು ರೈತ ಸಮುದಾಯದ ಕ್ಷಮೆ ಕೋರುವಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಸೂಚಿಸಬೇಕು, ಟಿ ಬಿ ಜಯಚಂದ್ರರವರ ಅಧ್ಯಕ್ಷತೆಯ ಸದನ ಸಮಿತಿ ಶಿಫಾರಸ್ಸಗಳನ್ನು ಜಾರಿ ಮಾಡಬೇಕು, ಬಿಎಂಐಸಿ ಯೋಜನೆ ರದ್ದುಪಡಿಸಿ ನೈಸ್ ಕಂಪನಿಯ ಹಗರಣ, ಭ್ರಷ್ಟಾಚಾರ, ಅಕ್ರಮಗಳಿಗೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸಬೇಕು, ಹೆಚ್ಚುವರಿ ಭೂಮಿಯನ್ನು ನೈಸ್ ಕಂಪನಿಯಿಂದ ವಾಪಸ್ಸು ಪಡೆಯುವ ಸುಪ್ರೀಂ ಕೋರ್ಟ್ ತೀರ್ಪು ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸುತ್ತದೆ.
ಉಪ ಮುಖ್ಯಮಂತ್ರಿರವರ ರೈತ ದ್ರೋಹ ಹೇಳಿಕೆ ಖಂಡಿಸಿ ಡಿ ಕೆ ಶಿವಕುಮಾರ್ ರವರ ಪ್ರತಿಕೃತಿ ಸುಟ್ಟು ಪ್ರತಿಭಟಿಸಲು ನೈಸ್ ಸಂತ್ರಸ್ಥ ರೈತರಿಗೆ ಹಾಗೂ KPRS ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಕರೆ ನೀಡುತ್ತದೆ.
ವಂದನೆಗಳೊಡನೆ
ಜಿಸಿ ಬಯ್ಯಾರೆಡ್ಡಿ, ಅಧ್ಯಕ್ಷರು
ಟಿ ಯಶವಂತ, ಪ್ರಧಾನ ಕಾರ್ಯದರ್ಶಿ




