ಜಿ.ಎಂ.ಸಿದ್ದೇಶ್ವರ್ ಮತದಾನ ಗೌಪ್ಯತೆ ನಿಯಮ ಉಲ್ಲಂಘಿಸಿದ್ದಾರೆ: ಕೆಪಿಸಿಸಿ
ಬೆಂಗಳೂರು: ಸಂಸದ ಜಿಎಂ ಸಿದ್ದೇಶ್ವರ್ ಅವರಿಗೆ ತಮ್ಮ ಪತ್ನಿ ಗೃಹಲಕ್ಷ್ಮೀ, ಗೃಹಜ್ಯೋತಿ ಮುಂತಾದ ಗ್ಯಾರಂಟಿ ಯೋಜನೆಗಳಿಂದ ಪ್ರಭಾವಿತಗೊಂಡು ಕಾಂಗ್ರೆಸ್ ಗೆ ಮತ ಹಾಕಬಹುದು ಎಂಬ ಅನುಮಾನವಿತ್ತೇ!? ಎಂದು ಕೆಪಿಸಿಸಿ ಪ್ರಶ್ನಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದಾವಣಗೆರೆ ಕ್ಷೇತ್ರದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಪತ್ನಿಯೊಂದಿಗೆ ಆಗಮಿಸಿದ್ದ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಪತ್ನಿ ಮತದಾನ ಮಾಡುವ ವೇಳೆ ಇವಿಎಂ ಬಳಿ ಇರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಪಿಸಿಸಿ, ಮತದಾನದಲ್ಲಿ ಯಾವುದೇ ವ್ಯಕ್ತಿ ಗೌಪ್ಯತೆ ಕಾಪಾಡಿಕೊಳ್ಳುವುದು ಅವರ ಹಕ್ಕು ಹಾಗೂ ಮತದಾನದ ಗೌಪ್ಯತೆಗೆ ಯಾರೂ ಕೂಡ ಧಕ್ಕೆ ತರಬಾರದು ಎಂದಿದೆ.
ಆದರೆ ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪತಿ ಹಾಗೂ ಸಂಸದ ಜಿ.ಎಂ ಸಿದ್ದೇಶ್ವರ್ ಅವರು ಮತದಾನದ ಗೌಪ್ಯತೆಯ ನಿಯಮ ಉಲ್ಲಂಘಿಸಿ ಗಾಯತ್ರಿ ಸಿದ್ದೇಶ್ವರ್ ಅವರು ಮತದಾನ ಮಾಡುವ ವೇಳೆ ಇವಿಎಂ ಬಳಿ ಇದ್ದಾರೆ ಎಂದಿದೆ.
Chief Electoral Officer Karnataka ಅವರು ಕೂಡಲೇ ಈ ಬಗ್ಗೆ ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.




