ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಈ 06 ಉಚಿತ ಸೌಲಭ್ಯಗಳನ್ನು, ವಾಹನದ ಟೈರ್ ಗಳಿಗೆ ಉಚಿತ ಗಾಳಿಯ ಸೌಲಭ್ಯ, ಪೆಟ್ರೋಲ್ ಬಂಕ್ ಆವರಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಗ್ರಾಹಕರು ಮತ್ತು ಸಿಬ್ಬಂದಿ ಇಬ್ಬರಿಗೂ ಶೌಚಾಲಯ ಸೌಲಭ್ಯಗಳು, ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸಾ ಕಿಟ್‌ಗಳ ಸೌಲಭ್ಯಗಳನ್ನು ಒದಗಿಸಬೇಕು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಗ್ರಾಹಕರು ನಿಖರವಾದ ಇಂಧನವನ್ನು ಪಡೆಯುವಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸಹಕರಿಸುವುದು ಹಾಗೂ ಪೆಟ್ರೋಲ್ ಮತ್ತು ಡೀಸೆಲ್‌ನ ಗುಣಮಟ್ಟದ ಕುರಿತು ಗ್ರಾಹಕರಿಗೆ ಮಾಹಿತಿ ಒದಗಿಸುವುದು, ಪೆಟ್ರೋಲ್ ಬಂಕ್ ಆವರಣದಲ್ಲಿ ತುರ್ತು ಸಂಪರ್ಕ ಸಂಖ್ಯೆಗಳನ್ನು ಗ್ರಾಹಕರಿಗೆ ಕಾಣುವಂತೆ ಸ್ಪಷ್ಟ ಪ್ರದರ್ಶನ ಮಾಡುವುದು ಸಾರ್ವಜನಿಕರಿಗೆ ಕಡ್ಡಾಯವಾಗಿ ಒದಗಿಸಬೇಕಾಗಿದೆ.
ಪೆಟ್ರೋಲ್ ಬಂಕ್‌ಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಕಂಡುಬಂದಲ್ಲಿ ಗ್ರಾಹಕರು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಸೇಲ್ಸ್ ಆಫೀಸರ್ 7022945432, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಸೇಲ್ಸ್ ಆಫೀಸರ್ 7033096059, ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಸೇಲ್ಸ್ ಆಫೀಸರ್ 9188692387 ಅಧಿಕಾರಿಗಳಿಗೆ ದೂರು ನೀಡಬಹುದು.




