ಹಳೆಯ ಮಾದರಿಯ ಮೀಟರ್ ಗಳಿಗಿಂತ ವಿಶಿಷ್ಟವಾಗಿರುವ ಸ್ಮಾರ್ಟ್ ಮೀಟರ್ ಗಳು ಜಿಪಿಆರ್ ಎಸ್ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕ ಹೊಂದಿರುತ್ತವೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಅಡ್ವಾನ್ಸ್ಡ್ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್ (AMI) ತಂತ್ರಜ್ಞಾನದ ಸ್ಮಾರ್ಟ್ ಮೀಟರ್ ಗಳು ವಿದ್ಯುತ್ ಬಳಕೆ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಗ್ರಾಹಕರು ಹಾಗೂ ಎಸ್ಕಾಂಗಳ ನಡುವೆ ನೇರ ಸಂಪರ್ಕ ಕಲ್ಪಿಸಲಿವೆ.
ಮೊಬೈಲ್ ಅಪ್ಲಿಕೇಶನ್ ಮೂಲಕ ನೈಜ ಸಮಯದ ವಿದ್ಯುತ್ ಬಳಕೆ, ವೊಲ್ಟೇಜ್, ಪವರ್ ಫ್ಯಾಕ್ಟರ್ ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯ ಪಡೆಯಬಹುದು. ಮುಂಚಿತವಾಗಿ ಹಣ ಪಾವತಿಸಿ ತಮ್ಮ ಆಯ್ಕೆಯ ದಿನಗಳ ಅವಧಿಗೆ ರಿಜಾರ್ಜ್ ಮಾಡಿಕೊಳ್ಳಬಹುದು. ಗ್ರಾಹಕರು ಮುಂಚಿತವಾಗಿ ಹಣ ಪಾವತಿಸಿ ವಿದ್ಯುತ್ ಬಳಸಬಹುದು. ಒಂದು ವೇಳೆ ವಿದ್ಯುತ್ ಕಡಿತಗೊಂಡರೆ ಗ್ರಾಹಕರು ಬಿಲ್ ಪಾವತಿಸಿದ ತಕ್ಷಣ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದು.
ಏನಿದು ಆರ್ ಡಿ ಎಸ್ ಎಸ್?: ಕೇಂದ್ರ ಇಂಧನ ಪ್ರಾಧಿಕಾರದ ನಿರ್ದೇಶನದಂತೆ 2021-22ನೇ ಸಾಲಿನಲ್ಲಿ ಕೇಂದ್ರದ ಇಂಧನ ಸಚಿವಾಲಯ ಪರಿಷ್ಕೃತ ವಿತರಣಾ ವಲಯ ಯೋಜನೆ (RDSS- Revamped Distribution Sector Scheme) ರೂಪಿಸಿದೆ. ಈ ಯೋಜನೆ ಒಪ್ಪಿಕೊಂಡಿದ್ದರೆ, ಎಲೆಕ್ಟ್ರಿಕಲ್ ಮೂಲ ಸೌಕರ್ಯವನ್ನು ಒದಗಿಸಲು ಕೇಂದ್ರ ಸರ್ಕಾರ ಶೇ. 60ರಷ್ಟು ಅನುದಾನ ನೀಡುತ್ತಿತ್ತು. ಜತೆಗೆ, ಸ್ಮಾರ್ಟ್ ಮೀಟರ್ ಗಳ ಬದಲಾವಣೆ ಮಾಡಲು ಒಟ್ಟು ವೆಚ್ಚದ ಶೇ.15ರಷ್ಟು ಅಥವಾ ಗರಿಷ್ಠ 900 ರೂ. ಕೇಂದ್ರ ಸರ್ಕಾರ ನೀಡುತ್ತಿತ್ತು.
ಆದರೆ, ರಾಜ್ಯ ಸರ್ಕಾರಗಳು ಸಂಬಂಧಿಸಿದ ವಿದ್ಯುತ್ ಸರಬರಾಜು ಕಂಪನಿಗಳಿಗೆ ಬಾಕಿ ಇರುವ ಸಬ್ಸಿಡಿ, ಇತರೆ ಬಾಕಿಗಳನ್ನು ಪಾವತಿಸಿದರೆ ಮಾತ್ರ ಯೋಜನೆಯ ಅನುಕೂಲ ಪಡೆದುಕೊಳ್ಳಬಹುದು ಎಂದಿತ್ತು. ಅಲ್ಲದೆ, ಎಲ್ಲಾ ಗ್ರಾಹಕರೂ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳುವುದು ಕಡ್ಡಾಯ ಎಂಬ ನಿಬಂಧನೆ ವಿಧಿಸಲಾಗಿತ್ತು. ಈ ಷರತ್ತುಗಳನ್ನು ಅಂದಿನ ಸರ್ಕಾರ ಒಪ್ಪದ ಕಾರಣ ರಾಜ್ಯ ಕೇಂದ್ರದ ಆರ್ ಡಿಎಸ್ ಯೋಜನೆಯನ್ನು ಒಪ್ಪಿಕೊಂಡಿರಲಿಲ್ಲ. ಕೇಂದ್ರ ಸರ್ಕಾರದ ಆರ್ ಡಿಎಸ್ ಯೋಜನೆ ಒಪ್ಪಿಕೊಂಡಿದ್ದರೆ, ಹಾಲಿ ಗ್ರಾಹಕರು ಸೇರಿದಂತೆ ಎಲ್ಲರೂ ಸ್ಮಾರ್ಟ್ ಮೀಟರ್ ಅವಡಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇತ್ತು. ಆರ್ ಡಿ ಎಸ್ ಎಸ್ ಯೋಜನೆಯಡಿ ಸ್ಮಾರ್ಟ್ ಮೀಟರ್ ಮತ್ತು ಸಾಫ್ಟ್ವೇರ್ ಸೇರಿ ದರ ನಿಗದಿಪಡಿಸಲಾಗುತ್ತದೆ.




