ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಕೇಂದ್ರ ಮಂತ್ರಿ ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಉತ್ತರಿಸಿದ ಅವರು,ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬುದಾಗಿ ಹೇಳಿಕೆ ನೀಡಿರುವ ನಾಯಕರುಗಳು ನೋಡಿದ್ದಾರೆಯೇ ಎಂದು ಕೇಳಿದರು.
ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಹೇಳಿಕೆ ನೀಡಿದ್ದಾರೆ.ಇನ್ನು ಯಾರ ಮಾತನ್ನು ನಂಬಬೇಕು. ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿಲ್ಲ ಎಂದಿರುವ ವೈದ್ಯರ ಮಾತನ್ನು ನಾನು ಕೂಡ ಒಪ್ಪುತ್ತೇನೆ ಎಂದರು.
ನಾನು ಮೂರನೇ ಸಲ ಗೃಹ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಯಾವ ಸಂದರ್ಭದಲ್ಲಿ ಏನು ತೀರ್ಮಾನ ತೆಗೆದುಕೊಳ್ಳಬೇಕು. ನಮ್ಮ ರಾಜ್ಯದ ಕಾನೂನು ವ್ಯವಸ್ಥೆಯ ದೃಷ್ಟಿಯಿಂದ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ಅರಿವು ನನಗಿದೆ ಎಂದು ಹೇಳಿದರು.
38 ವರ್ಷ ರಾಜಕಾರಣ ಮಾಡಿದ್ದೇನೆ. ಪಕ್ಷದಲ್ಲಿ ಮತ್ತು ಸರ್ಕಾರದಲ್ಲಿ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ನನಗೂ ಕೂಡ ಅಪಾರವಾದ ಅನುಭವ ಇದೆ. ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಏನು ಕ್ರಮ, ಯಾವ ಸಂದರ್ಭದಲ್ಲಿ ತೆಗೆದುಕೊಳ್ಳಬೇಕು, ಕಠಿಣವಾದ ನಿರ್ಧಾರಗಳನ್ನು ಯಾವಾಗ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದೇನೆ ಎಂದರು.
ಯಾವುದೇ ವಿಚಾರವಾಗಲಿ ತಿಳಿದುಕೊಂಡು ಮಾತನಾಡಬೇಕು. ಇಲ್ಲವಾದರೆ ಬೇರೆ ರೀತಿಯ ಪರಿಣಾಮ ಆಗುತ್ತದೆ. ನನ್ನನ್ನು ಸೇರಿದಂತೆ ರಾಜಕೀಯ ನಾಯಕರುಗಳು ಮಾತನಾಡುವಾಗ ಹೇಳಿಕೆಗಳು ಸಮಾಜದಲ್ಲಿ ಏನಾಗಬಹುದು ಎಂಬುದನ್ನು ಅರಿತುಕೊಂಡು ಮಾತನಾಡಬೇಕು ಎಂದರು.




