ಬೆಂಗಳೂರು: ಯಜಮಾನ್ ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟರವರ 103ನೇ ಆರಾಧನಾ ಮಹೋತ್ಸವ ಆಗಸ್ಟ್ 6 ರಂದು ನಡೆಯಲಿದೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಸಂಸದರು, ಶಾಸಕರು ಹಾಗೂ ಗಣ್ಯ ವ್ಯಕ್ತಿಗಳು,ಸಮುದಾಯದ ಹಿರಿಯರು ಭಾಗವಹಿಸುವರು.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಈ ಬಗ್ಗೆ ಮಾಹಿತಿ ನೀಡಲು ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ವತಿಯಿಂದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷ ಸುರೇಶ್ ಎಸ್., ಶ್ರೀ ದೊಡ್ಡಣ್ಣ ಶೆಟ್ಟರವರ ಧಾರ್ಮಿಕ ಕಾರ್ಯ, ಬಡವರಿಗೆ ಉಚಿತ ಶಿಕ್ಷಣ, ಹಾಗೂ,ಉಚಿತ ಊಟ,ವಸತಿ ನೀಡಿದ ಮಹಾನ್ ವ್ಯಕ್ತಿತ್ವದವರು. ಮೈಸೂರು ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜೊತೆಯಲ್ಲಿ ಯಜಮಾನ್ ಜನೋಪಕಾರಿ ದೊಡ್ಡಣ್ಣ ಶೆಟ್ಟರವರು ಉತ್ತಮ ಒಡನಾಟವಿತ್ತು ಎಂದರು.
ದೊಡ್ಡಣ್ಣ ಶೆಟ್ಟರ ಸಮಾಜ ಸೇವೆಯನ್ನು ಗುರುತಿಸಿ ಇವರಿಗೆ ಜನೋಪಕಾರಿ ಎಂಬ ಬಿರುದು ಕೊಟ್ಟು ಚಿನ್ನದ ಪದಕವನ್ನು ನೀಡಿ ಗೌರವಿಸಿದ್ದಾರೆ. ಮಹಾರಾಜರು ನೀಡಿದ 5.1/5 ಎಕರೆ ಜಾಗದಲ್ಲಿ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಧರ್ಮ ಸಂಸ್ಥೆ ಸ್ಥಾಪಿಸಿದರು. 1905ರಲ್ಲಿ ಕಲಾಸಿಪಾಳ್ಯದಲ್ಲಿ ಸಭಾಂಗಣ ಕಟ್ಟಡ ನಿರ್ಮಾಣ ಮಾಡಿದರು ಎಂದರು.
ದೊಡ್ಡಣ್ಣ ಶೆಟ್ಟ ಸಾಮಾಜಿಕ ಸೇವೆ ಮುಂದಿನ ಪೀಳಿಗೆಗೆ ತಿಳಿಯಬೇಕು, ಅವರ ಹಾಕಿಕೊಟ್ಟ ಮಾರ್ಗದರ್ಶನ ಸಾಗಬೇಕು ಎಂಬುದು ಧರ್ಮ ಸಂಸ್ಥೆಯ ಉದ್ದೇಶವಾಗಿದೆ. ಆಗಸ್ಚ್ 6ರಂದು ಶ್ರೀ ದೊಡ್ಡಣ್ಣ ಶೆಟ್ಟರವರ 103ನೇ ಆರಾಧನಾ ಮಹೋತ್ಸವವನ್ನು ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟಿರ ಬಯಲು ರಂಗಮಂದಿರದಲ್ಲಿ ಬೆಳಗ್ಗೆ 6 ಗಂಟೆಗೆ ಜರುಗಲಿದೆ ಎಂದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ರವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆಯನ್ನು, ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ಉದಯ ಗರುಡಾಚಾರ್, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಧರ್ಮ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಸಮುದಾಯದ ಎಲ್ಲಾ ಸಂಘ ಸಂಸ್ಥೆಯವರು ಹಿರಿಯ ಮುಖಂಡರು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಆಡಳಿತ ಮಂಡಳಿಯ ಸದಸ್ಯರಾದ ವಿನೋದ್ ಎಂ.ಜಿ., ವಿ.ಎಸ್.ಮಂಜುನಾಥ್, ನಿರಂಜನ್ ಗಾಣಿಗ. ಎನ್,ಮುನಿಚೆಟ್ಟಿ.ವಿ , ಉಮಾದೇವಿ ಜಿ.ಎ,ಸ್ಪಪ್ನಚಂದ್ರಶೆಟ್ಟಿ, ರಾಜಣ್ಣ ಎಂ.ಸಿ, ಷಹ ಸಂಜಯ್, ಕೃಷ್ಣವೇಣಿ ಡಿ.ಸಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.



