ಬಿಟಿಎಂ ಲೇಔಟ್ ನಲ್ಲಿ ನಡೆಯದು ಕಮಲ ಅರಳಿಸುವ ಯತ್ನ

3 years ago

ಬಿ ಟಿ ಎಂ ಲೇಔಟ್: ಬೆಂಗಳೂರು ನಗರದ ಜಯನಗರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಆಯ್ಕೆಯಾಗುತ್ತಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ, ಕ್ಷೇತ್ರ ಪುನರ್ ವಿಂಗಡಣೆಯ ನಂತರ ಅಸ್ತಿತ್ವಕ್ಕೆ ಬಂದ ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಪ್ರಸಾದ್ ರೆಡ್ಡಿ ಅವರಿಂದ ಪ್ರಬಲ ಪೈಪೋಟಿ ಎದುರಿಸಿದ್ದ ರಾಮಲಿಂಗಾರೆಡ್ಡಿ ಅವರಿಗೆ ಆ ನಂತರದಲ್ಲಿ ಅಂತಹ ಎದುರಾಳಿ ಎದುರಾಗಿಲ್ಲ. ಜೆಡಿಎಸ್ ಅಭ್ಯರ್ಥಿಯಾಗಿ ವೆಂಕಟೇಶ್ ಕಣದಲ್ಲಿ ಇದ್ದರು ಅಷ್ಟೊಂದು ಪರಿಣಾಮಕಾರಿಯಾಗಿಲ್ಲ.

ಬಿಜೆಪಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ರೆಡ್ಡಿ ಸಮುದಾಯದ ಮತದಾರರ ಶ್ರೀಧರರೆಡ್ಡಿ ಅವರನ್ನು ಕಣಕ್ಕಿಳಿಸುವ ಮೂಲಕ ರಾಮಲಿಂಗಾರೆಡ್ಡಿ ಅವರಿಗೆ ಪ್ರಬಲ ಪೈಪೋಟಿ ನೀಡಿದೆ. ಆದರೆ ಕ್ಷೇತ್ರದಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸಿರುವ ರಾಮಲಿಂಗಾರೆಡ್ಡಿ ಇದು ತಮ್ಮ ಕೊನೆಯ ಚುನಾವಣೆ ಎಂದು ಹೇಳುತ್ತಾ ಪ್ರಚಾರ ನಡೆಸಿರುವುದು ಬಿಜೆಪಿಗೆ ದೊಡ್ಡ ಅಡ್ಡಿಯಾಗಿದೆ.

Leave a Reply