ಬಳ್ಳಾರಿ: ನಾಯಿ ಕಚ್ಚಿದ ದಿನವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೇಬಿಸ್ ರೋಗ ತಡೆಯುವ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ ಸಲಹೆ ನೀಡಿದರು.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ, ಮಹಾನಗರ ಪಾಲಿಕೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಡಿಹಟ್ಟಿ- ಆಶ್ರಯ ಕಾಲೋನಿ ಇವರ ಸಂಯುಕ್ತಾಶ್ರಯದಲ್ಲಿ ಕೌಲ್‌ಬಜಾರ್‌ನ ದಾನಪ್ಪ ಸ್ಟ್ರೀಟ್‌ನಲ್ಲಿ ನಾಯಿ ಕಡಿತ ಹಾಗೂ ಹಾವು ಕಡಿತ ಕುರಿತು ಬುಧವಾರ ಏರ್ಪಡಿಸಿದ್ದ ಜನಜಾಗೃತಿ ಶಿಬಿರದಲ್ಲಿ ಅವರು ಮಾತನಾಡಿದರು.
ಸಾಕಿದ ಅಥವಾ ಬೀದಿ ನಾಯಿ ಕಚ್ಚಿದರೆ, ಉಗುರಿನಿಂದ ಗೀರಿದರೆ ಅಥವಾ ನಮ್ಮ ಮೈಮೇಲೆ ಈಗಾಗಲೇ ಇರುವ ಗಾಯವನ್ನು ನಾಲಿಗೆಯಿಂದ ನೆಕ್ಕಿದರೆ ಅದನ್ನು ನಿರ್ಲಕ್ಷ್ಯ ವಹಿಸುವಂತಿಲ್ಲ. ನಾಯಿ ಕಚ್ಚಿದ ಜಾಗವನ್ನು ಸೋಪು ಮತ್ತು ನೀರಿನಿಂದ ತೊಳೆದು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಲಹೆಯಂತೆ ಲಸಿಕೆ ಪಡೆಯಬೇಕು ಎಂದರು.
ರೇಬೀಸ್ ಸೋಂಕುವುಳ್ಳ ನಾಯಿ ಕಚ್ಚಿದಾಗ ರೇಬೀಸ್ ನಿರೋಧಕ ಚುಚ್ಚುಮದ್ದು ಪಡೆಯದಿದ್ದರೆ ಅಂತಹ ವ್ಯಕ್ತಿಗೆ ರೇಬೀಸ್ ಕಾಯಲೆಯ ಸೋಂಕಿಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಅವರು ಕ್ರಮೇಣ ನೀರು ಕುಡಿಯುವುದಿಲ್ಲ, ಗಾಳಿ ಬೀಸಿದರೆ ಹೆದರುತ್ತಾರೆ, ಬೆಳಕು ಕಂಡರೆ ಭಯ ಪಡುತ್ತಾರೆ, ರೋಗ ದೀರ್ಘವಾದಾಗ ಮರಣ ಸಂಭವಿಸಬಹುದು. ಅಲ್ಲದೆ ನಾಯಿ ಕಡಿತ ಮೆದುಳಿಗೆ (ತಲೆಗೆ) ಹತ್ತಿರವಾಗಿದ್ದಲ್ಲಿ ಅಪಾಯ ಹೆಚ್ಚು. ಹಾಗಾಗಿ ವೈದ್ಯರ ಸಲಹೆಯಂತೆ ರೇಬಿಸ್ ಚುಚ್ಚುಮದ್ದನ್ನು ಕಚ್ಚಿದ ಮೊದಲ ದಿನ, 3ನೇ ದಿನ, 7ನೇ ದಿನ ಮತ್ತು 28 ದಿನದಂದು ತಪ್ಪದೇ ಲಸಿಕೆ ಹಾಕಿಸಬೇಕು ಎಂದರು.
ಹಾವು ಕಡಿತ ಜಾಗೃತಿ:
ಆಶ್ರಯ ಕಾಲೋನಿ ವೈದ್ಯಾಧಿಕಾರಿ ಡಾ.ಕಾಶೀಪ್ರಸಾದ್ ಮಾತನಾಡಿ, ಹಾವು ಕಚ್ಚಿದಾಗ ಗಾಬರಿಗೊಳ್ಳದೇ, ಕಚ್ಚಿರುವ ಭಾಗವು ಹೃದಯದ ಕೆಳಗೆ ಬರುವ ಹಾಗೆ ನಿಗಾವಹಿಸಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಬೇಕು. ವ್ಯಕ್ತಿಯ ರಕ್ತಪರಿಚಲನೆಗೆ ತಡೆಯಾಗುವಂತಹ ಕೈ ಗಡಿಯಾರ, ಬಳೆ, ಉಂಗುರ ಮುಂತಾದವುಗಳನ್ನು ತೆಗೆಯಬೇಕು. ಕಚ್ಚಿದ ಭಾಗವು ಅಲುಗಾಡದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯವಾಗಿ ಆಸ್ಪತ್ರೆಗೆ ಹೋಗುವಾಗ ವ್ಯಕ್ತಿಯ ರೋಗ ಲಕ್ಷಣಗಳಾದ ತೇಲುಗಣ್ಣು, ಕಣ್ಣುಮುಚ್ಚುವುದು, ನಾಲಿಗೆ ತೊದಲುವಿಕೆ, ನುಂಗಲು ಕಷ್ಟವಾಗುವುದು, ಉಸಿರಾಡಲು ಕಷ್ಟವಾಗುವುದು ಮುಂತಾದವುಗಳನ್ನು ಗಮನಿಸಬೇಕು. ಈ ರೀತಿಯಾದಲ್ಲಿ ನರಮಂಡಲಕ್ಕೆ ಹಾನಿ ಮಾಡುವ ವಿಷದ ಅಂಶ ಲಕ್ಷಣವಾಗಿರುತ್ತದೆ ಎಂದರು.
ಹಾಗೆಯೇ ಗಾಯದ ಜಾಗದಲ್ಲಿ ತೀವ್ರ ಉರಿ, ನೋವುಹರಡುವಿಕೆ ಅಥವಾ ಊದುವಿಕೆ ಗಾಯದ ಸುತ್ತ ಬಣ್ಣಹೀನವಾಗುವುದು, ಕೆಳಬೆನ್ನಿನಲ್ಲಿ ನೋವು ಮುಂತಾದ ಲಕ್ಷಣಗಳು ಅಂಗಾಂಗಕ್ಕೆ ಹಾನಿ ಮಾಡುವ ವಿಷದ ಅಂಶವಾಗಿರುತ್ತದೆ. ಈ ಲಕ್ಷಣಗಳನ್ನು ರೋಗಿಯ ಜೊತೆಗಿರುವ ವ್ಯಕ್ತಿಗಳು ವೈದ್ಯರಿಗೆ ತಿಳಿಸುವ ಮೂಲಕ ವ್ಯಕ್ತಿಯ ಜೀವ ಕಾಪಾಡಲು ಸಾಧ್ಯವಾಗುವ ಚಿಕಿತ್ಸೆ ಒದಗಿಸಲು ಸಹಾಯಕವಾಗುವುದು ಎಂದರು.
ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ ಬಟ್ಟೆಯನ್ನು ಕಟ್ಟುವುದು, ಬ್ಲೇಡ್ ಅಥವಾ ಚಾಕುವಿನಿಂದ ಗಾಯ ಮಾಡುವುದು, ಗಾಯವನ್ನು ಸುಡುವುದು, ನಾಟಿ ಔಷಧಿಗಳನ್ನು ನೀಡುವುದು ಮುಂತಾದವುಗಳನ್ನು ಮಾಡಬಾರದು ಎಂದರು.
ಇದೇ ಸಂದರ್ಭದಲ್ಲಿ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವಿಕೆಯಿಂದ ಹರಡುವ ಡೆಂಗ್ಯು, ತಂಬಾಕು ಸೇವನೆಯ ದುಷ್ಪರಿಣಾಮ, ಶುದ್ಧ ನೀರಿನ ಮಹತ್ವ, ಕೈತೊಳೆಯುವಿಕೆ ವಿಧಾನಗಳ ಕುರಿತು ಸಾರ್ವಜನಿಕರಿಗೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಸಾಂಕ್ರಾಮಿಕ ರೋಗ ತಜ್ಞರಾದ ಡಾ.ವಿಶಾಲಾಕ್ಷಿ, ತಂಬಾಕು ನಿಯಂತ್ರಣ ವಿಭಾಗದ ಸರಸ್ವತಿ, ಜಿಲ್ಲಾ ಕಾಲರಾ ನಿಯಂತ್ರಣ ತಂಡದ ಕೆ.ಎಮ್.ಶಿವಕುಮಾರ್, ತಿಪ್ಪೇಸ್ವಾಮಿ, ಉಮಾದೇವಿ, ಸವಿತಾ, ಖಾಸಿಂ ವಲಿ, ಹೆಚ್‌ಐಓ ಮಹಾಲಿಂಗ, ದುರ್ಗಾಪ್ರಸಾದ್, ಪಿಹೆಚ್‌ಸಿಓ ದಾನಕುಮಾರಿ, ಕೌಸರ್, ವಿಜಯಲಕ್ಷ್ಮಿ, ಸುಮಿತ್ರಾ, ರಾಧಿಕಾ ಸೇರಿದಂತೆ ಆಶಾ ಕಾರ್ಯಕರ್ತೆಯರು, ತಾಯಂದಿರು, ಸಾರ್ವಜನಿಕರು ಉಪಸ್ಥಿತರಿದ್ದರು.



