ಬಳ್ಳಾರಿ ಜಿಲ್ಲೆಯಲ್ಲಿ 15 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಂದ ಪೋಷಕರಿಗೆ ಪತ್ರ
ಸ್ವೀಪ್ ಸಮಿತಿ ಅಭಿಯಾನ
ಬಳ್ಳಾರಿ: ಪ್ರೀತಿಯ ಅಪ್ಪ-ಅಮ್ಮ, ನಾನಿಲ್ಲಿ ಕ್ಷೇಮ, ಪರೀಕ್ಷೆಗೆ ಸಿದ್ಧತೆಯನ್ನು ಚೆನ್ನಾಗಿ ಮಾಡುತ್ತಿರುವೆ. ಈ ವರ್ಷ ಲೋಕಸಭೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ನೀವು ಯಾವುದೇ ಆಮಿಶಕ್ಕೆ ಒಳಗಾಗದೇ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ, ಅಣ್ಣನಿಗೂ ಮತದಾನ ಮಾಡಲು ತಿಳಿಸಿ.
ನಿಮ್ಮ ಮಗು/ಮಗಳು
ಇದು ಮನೆಯಿಂದ ದೂರವಿದ್ದು, ಹಾಸ್ಟೆಲ್ಗಿಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮತದಾನ ಮಾಡಲು ಬರೆದ ಪತ್ರಗಳು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈ ಬಾರಿ ಹೆಚ್ಚು ಹೆಚ್ಚು ಮತದಾರರು ಮತದಾನ ಪ್ರಕ್ರಿಯೆ ಕೈಗೊಳ್ಳಲು ಜಿಲ್ಲಾ ಸ್ವೀಪ್ ಸಮಿತಿ ವಿವಿಧ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಬಳ್ಳಾರಿ ಜಿಲ್ಲಾ ಸ್ವೀಪ್ ಸಮಿತಿಯು ‘ವಿದ್ಯಾರ್ಥಿಗಳಿಂದ ಪೋಷಕರಿಗೆ, ಒಡಹುಟ್ಟಿದವರಿಗೆ ಹಾಗೂ ನೆರೆಹೊರೆಯವರಿಗೆ ಪತ್ರ ಅಭಿಯಾನ’ ಎಂಬ ವಿಶೇಷ ಜಾಗೃತಿ ಕೈಗೊಂಡಿದೆ.
ಅದರಂತೆ, ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸುವ ಅಂಗವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ 295 ಶಾಲೆಗಳು ಹಾಗೂ ವಸತಿನಿಲಯಗಳಲ್ಲಿನ ಸುಮಾರು 15 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಂದ ಪೋಷಕರಿಕರಿಗೆ ಪತ್ರ ಬರೆಯುವ ಮೂಲಕ ಪತ್ರ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಬಳ್ಳಾರಿ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಪತ್ರ ಬರೆದು ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಲಾಯಿತು.
ಜಿಲ್ಲಾ ಮಟ್ಟದಲ್ಲಿ ಬಳ್ಳಾರಿಯ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ ವಸತಿ ನಿಲಯದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಮಾತಾಡಿ, ವಿದ್ಯಾರ್ಥಿಗಳಿಗೆ ಚುನಾವಣೆ ಪ್ರಕ್ರಿಯೆ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾನದ ಅವಶ್ಯಕತೆ ಕುರಿತು ಮಾಹಿತಿಯನ್ನು ನೀಡಿದರು.
ತಮ್ಮ ಊರನ್ನು, ಮನೆಯನ್ನು ಬಿಟ್ಟು ಓದಲು ಆಗಮಿಸಿರುವ ನೀವುಗಳು ನಿಮ್ಮ ಪೋಷಕರಿಗೆ ಪತ್ರ ಬರೆಯುವ ಮೂಲಕ ಯಾವುದೇ ಆಮಿಷಕ್ಕೆ ಒಳಗಾಗದೇ ಸೂಕ್ತ ಅಭ್ಯರ್ಥಿಗೆ ಹಕ್ಕು ಚಲಾಯಿಸುವ ಕುರಿತು ಪ್ರೇರಣೆ ಮಾತುಗಳನ್ನು ಉಲ್ಲೇಖಿಸಿ ಪತ್ರ ಬರೆಯಬೇಕು ಎಂದರು.
ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಮತದಾನದಿಂದ ವಂಚಿತರಾದ ಮತದಾರರಲ್ಲಿ ಜಾಗೃತಿ ಮೂಡಿಸಿ, ಮತದಾನ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಲಾಗಿದೆ. ಅದೇರೀತಿಯಾಗಿ ಕಡ್ಡಾಯ ಮತದಾನ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ವಿವಿಧ ಅಭಿಯಾನ ಕೈಗೊಳ್ಳಲಾಗುತ್ತಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳ ಮೂಲಕ ಪತ್ರ ಬರೆದು ಪೋಷಕ ಮತದಾರರಿಗೆ ಜಾಗೃತಿ ಮೂಡಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ವಾಗೀಶ್, ಜಿಪಂ ಸಹಾಯಕ ನಿರ್ದೇಶಕ ಬಸವರಾಜ ಹಿರೇಮಠ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ(ಗ್ರೇಡ್-1) ಮಮತಾ, ವಸತಿ ನಿಲಯದ ನಿಲಯಪಾಲಕರಾದ ಅಂಬಿಕಾ, ಉಷಾ, ಭಾರತಿ ಹಾಗೂ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೆಲ್ಲರೂ ಸೇರಿ ರೂಪಿಸಿದ್ದ “ಒಂದು ಕ್ಯಾಂಡೆಲ್ ನಿಮ್ಮ ರಾತ್ರಿ ಬೆಳಗುತ್ತೆ, ಒಂದು ವೋಟ್ ನಿಮ್ಮ ಜೀವನ ಬೆಳಗಿಸುತ್ತೆ” ಎಂಬ ಬೃಹತ್ ಗಾತ್ರದ ರಂಗೋಲಿಯು ಆಕರ್ಷಕವಾಗಿತ್ತು.
ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಶಾಲೆಗಳ ಮುಖ್ಯ ಗುರುಗಳು ಮತ್ತು ಶಿಕ್ಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಂದ ಪೋಷಕರಿಕರಿಗೆ ಪತ್ರ ಬರೆಯುವ ಮೂಲಕ ಪತ್ರ ಅಭಿಯಾನ ನಡೆಸಲಾಯಿತು.



