ದಾವಣಗೆರೆ: ಹೆಚ್ಐವಿ ಸೋಂಕಿತರೊಂದಿಗೆ ಕುಳಿತು ಊಟ ಮಾಡಿದರೆ ಅಥವಾ ಒಂದೇ ಮನೆಯಲ್ಲಿ ವಾಸವಿದ್ದ ಮಾತ್ರಕ್ಕೆ ಸೋಂಕು ಇತರರಿಗೆ ಹರಡುವುದಿಲ್ಲ. ಹೀಗಾಗಿ ಹೆಚ್ಐೇವಿ ಸೋಂಕಿತರನ್ನು ಸಾಮಾಜಿಕವಾಗಿ ದೂರವಿರಿಸುವುದು ಸರಿಯಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರೆಣ್ಣವನರ್ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಸಂಜೀವಿನಿ ಪಾಸಿಟಿವ್ ನೆಟ್ವರ್ಕ್, ಶ್ರೀ ದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ, ಅಭಯ ಸ್ಪಂದನ ಸ್ವಯಂ ಸೇವಾ ಸಂಸ್ಥೆ, ಜೆಪಿಎನ್ಜಿ ಎಸ್ಎುಸ್ ಸಂಸ್ಥೆ, ಜಿಲ್ಲೆಯ ಎಲ್ಲಾ ರಕ್ತನಿಧಿ ಕೇಂದ್ರಗಳು, ಜಿಲ್ಲಾ ಆರ್.ಆರ್.ಸಿ ಕಾಲೇಜು, ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್, ಘಟಕ, ಜಿಲ್ಲಾ ಎನ್.ವೈ.ಕೆ ಶಿಕ್ಷಣ ಇಲಾಖೆ, ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾನಿಲಯ ಇವರ ಸಹಯೋಗದೊಂದಿಗೆ ದೃಶ್ಯಕಲಾ ಮಹಾವಿದ್ಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “ವಿಶ್ವ ಏಡ್ಸ್ ದಿನಾಚರಣೆ”ಯನ್ನು ಉದ್ಘಾಟಿಸಿ ಮಾತಾನಾಡಿದರು.
ಹೆಚ್ಐವಿ, ಏಡ್ಸ್ ಸೋಂಕು ಹೊಂದಿರುವವರ ಜೊತೆಯಲ್ಲಿ ಕುಳಿತರೆ, ಜೊತೆಯಲ್ಲಿ ಊಟ ತಿಂಡಿ, ಬಟ್ಟೆ ಹಂಚಿಕೊಳ್ಳುವುದರಿಂದ, ಸೊಳ್ಳೆ ಕಚ್ಚುವುದರಿಂದ, ಒಂದೇ ಸ್ನಾನದ ಮನೆ, ಅಡುಗೆ ಮನೆ, ಶೌಚಾಲಯ ಬಳಸುವುದರಿಂದ ಸೋಂಕು ಇತರರಿಗೆ ಹರಡುವುದಿಲ್ಲ. ಸೋಂಕಿತರೊಂದಿಗೆ ಅಸುರಕ್ಷಿತ ಲೈಂಗಿಕತೆ, ಸೋಂಕಿತರಿಂದ ಪಡೆಯುವ ರಕ್ತದಾನದಿಂದ, ಸಂಸ್ಕರಣೆ ಮಾಡದ ಸೂಜಿ, ಸಿರಿಂಜ್ ಬಳಕೆಯಿಂದ ಹೆಚ್ಐಂವಿ ಸೋಂಕು ಇತರರಿಗೆ ಹರಡುತ್ತದೆ. ಹೀಗಾಗಿ ಸೋಂಕಿತರನ್ನು ಸಾಮಾಜಿಕವಾಗಿ ದೂರವಿರಿಸುವುದು, ತಿರಸ್ಕರಿಸುವುದು ಸರಿಯಲ್ಲ. ಹೆಚ್ಐಿವಿ ಸೋಂಕಿತರು ವೈದ್ಯರ ಸಲಹೆಯಂತೆ ಸರಿಯಾದ ಕ್ರಮದಲ್ಲಿ ನಿತ್ಯ ಔಷಧ ಸೇವನೆಯಿಂದ ಹಾಗೂ ಆರೋಗ್ಯಕರ ಜೀವನ ಶೈಲಿ ಅನುಸರಿಸಿದರೆ ಸಾಮಾನ್ಯರಂತೆ ಬದುಕಬಹುದು ಎಂದರು.
ಏಡ್ಸ್ ರೋಗ ರೋಗ ನಿರೋಧಕ ಶಕ್ತಿಯನ್ನು ಕುಂಠಿತಗೊಳಿಸುತ್ತದೆ ಮತ್ತು ಗುಣಾತ್ಮಕ ಜೀವನ ಮಟ್ಟವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಸಾರ್ವಜನಿಕರು ಏಡ್ಸ್ ರೋಗವು ಯಾವ ಮೂಲಗಳಿಂದ ಮತ್ತು ಯಾವ ರೀತಿ ಬರುತ್ತದೆ ಎಂಬುದನ್ನು ತಿಳಿಯಬೇಕು. ಏಡ್ಸ್ ಖಾಯಿಲೆಯು ಹೊರದೇಶದಿಂದ ಬಂದಿದ್ದು, ಈ ಖಾಯಿಲೆ ಕುರಿತು ಮುಖ್ಯವಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ರೋಗಬಂದ ನಂತರ ಪರಿತಪಿಸುವ ಬದಲು ರೋಗಗಳು ಬಾರದಂತೆ ಮುನ್ನೆಚರಿಕೆಯನ್ನು ವಹಿಸಬೇಕು. ಎಚ್.ಐ.ವಿ ಬಂದಿದೆ ಎಂದು ತಿಳಿದಾಕ್ಷಣ ಕುಗ್ಗಿ ಹೋಗದೆ, ಅದಕ್ಕೆ ಪರಿಹಾರವನ್ನು ಕಂಡುಕೊಂಡು ಬದುಕುಬೇಕು. ಪ್ರಜ್ಞಾವಂತರಾಗಿ ಬದುಕಿ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದರು.
2030ರ ವೇಳೆಗೆ ಏಡ್ಸ್ ಮುಕ್ತ ಸಮಾಜ ಮಾಡುವ ಗುರಿಯನ್ನು ಹೊಂದಲಾಗಿದ್ದು ಇದಕ್ಕೆ ಸಾರ್ವಜನಿಕರ ಸಹಭಾಗಿತ್ವ ಅತಿ ಮುಖ್ಯವಾಗಿದೆ. ಏಡ್ಸ್ ದಿನವನ್ನು ನಾವು ಸಂಭ್ರಮದಿಂದ ಆಚರಿಸುತ್ತಿಲ್ಲ. ಬದಲಾಗಿ ಏಡ್ಸ್ ಎಂಬ ಮಾರಣಾಂತಿಕ ಖಾಯಿಲೆ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತಿದೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು “ಹಕ್ಕುಗಳನ್ನು ಪಡೆಯಲು ಸರಿಯಾದ ಮಾರ್ಗ ಅನುಸರಿಸೋಣ ನನ್ನ ಆರೋಗ್ಯ ನನ್ನ ಹಕ್ಕು” ಎಂಬ ಘೋಷವಾಕ್ಯ ಉಪಯುಕ್ತವಾಗಿದ್ದು ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕಾರ್ಯವನ್ನು ಸಮುದಾಯಗಳು ಮಾಡಬೇಕಿದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ಮಾತಾನಾಡಿ, ಹೆಚ್ಐೋವಿ ರೋಗಕ್ಕೆ ಇದುವರೆಗೂ ಯಾವುದೇ ಲಸಿಕೆ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ಸೋಂಕು ಬಾರದಂತೆ ಮುಂಜಾಗ್ರತೆ ವಹಿಸುವುದು ಒಂದೇ ಮನುಕುಲಕ್ಕೆ ಸದ್ಯದ ಮಟ್ಟಿಗೆ ಇರುವ ದಾರಿಯಾಗಿದೆ. ಸೋಂಕಿತರಿಗೆ ಸಾಮಾಜಿಕ ಹಾಗೂ ಕೌಟುಂಬಿಕ ಬೆಂಬಲ ದೊರೆತಾಗ ಮಾತ್ರ, ಅವರೂ ಕೂಡ ಸಮಾಜದಲ್ಲಿ ಸಹಜ ಬದುಕು ಕಂಡುಕೊಳ್ಳಲು ಸಾಧ್ಯ. ಸಾರ್ವಜನಿಕರು ಮತ್ತು ಎನ್ಜಿೂಒ ಗಳು ಒಟ್ಟಾಗಿ ಜನರಲ್ಲಿ ಏಡ್ಸ್ನಡ ಕುರಿತು ತಿಳುವಳಿಕೆಯನ್ನು ಮೂಡಿಸಬೇಕು ಎಂದರು.
ಮಾರಣಾಂತಿಕ ಖಾಯಿಲೆಗಳ ಬಗ್ಗೆ ಜಾಗೃತಿಯನ್ನು ಮೂಡಿಸಲು ಸಮುದಾಯಗಳ ಸಹಭಾಗಿತ್ವ ಪ್ರಮುಖವಾಗಿದೆ. ಆರೋಗ್ಯಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಯಾವುದೇ ಸಂಕೋಚವಿಲ್ಲದೇ ಸಾರ್ವಜನಿಕರು ಪಡೆಯಬೇಕು. ಅಸುರಕ್ಷಿತ ಲೈಂಗಿಕತೆ ಮತ್ತು ಸಿರಿಂಜ್ ಬಳಕೆಯ ಸಂದರ್ಭದಲ್ಲಿ ಜನತೆ ಜಾಗೃತರಾಗಬೇಕು ಎಂದರು.
ಏಡ್ಸ್ ದಿನಾಚರಣೆ ಜಾಗೃತಿ ಜಾಥಾ : ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ವಿಶ್ವ ಏಡ್ಸ್ ದಿನಚಾರಣೆಯ ಅಂಗವಾಗಿ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಿಂದ ಆಯೋಜಿಸಲಾಗಿದ್ದ “ವಿಶ್ವ ಏಡ್ಸ್ ದಿನ-2024” ಜಾಥಾಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ಚಾಲನೆ ನೀಡಿದರು.
ಹೆಚ್.ಐ.ವಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಡಾ.ಸಂಜಯ್, ಇಎಸ್ಐಲ ಆಸ್ಪತ್ರೆಯ ವೈದ್ಯರಾದ ಡಾ.ರಾಕೇಶ್, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮಧಿಕಾರಿ ಡಾ.ಪಿ.ಡಿ.ಮುರುಳೀಧರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ;ದೇವರಾಜ.ಪಿ.ಪಟಿಗೆ, ಜಿಲ್ಲಾ ಆರೋಗ್ಯ ಶಿಕ್ಷಣಧಿಕಾರಿ ಡಾ.ಸುರೇಶ್.ಎನ್.ಬಾರ್ಕಿ, ವಿದ್ಯಾರ್ಥಿಗಳು ಸಾರ್ವಜನಿಕರು ಹಾಜರಿದ್ದರು.




