ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣವನ್ನು ತಾವೇ ಒಪ್ಪಿಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರದ ಅಭಿಯೋಜಕರು ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಈ ವಿಷಯ ಕೇಳಿದ ಹೈಕೋರ್ಟ್, ಅವರೇ ತಮ್ಮ ವಿರುದ್ಧದ ಆರೋಪ ಪ್ರಕರಣವನ್ನು ಒಪ್ಪಿಕೊಂಡಿದ್ದಾರೆ ಎನ್ನುವುದಕ್ಕೆ ಸಾಕ್ಷಿ ಎಲ್ಲಿದೆ ಎಂದು ಪ್ರಶ್ನಿಸಿದೆ.
ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ದಾಖಲಿಸಲಾಗಿರುವ ಪೋಕ್ಸೊ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಚಾರಣೆಗೆ ಪರಿಗಣಿಸಿರುವುದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಎಂ ಐ ಅರುಣ್ ಕೈಗೆತ್ತಿಕೊಂಡಿದ್ದಾರೆ.
ವಿಚಾರಣೆ ಆರಂಭವಾಗುತ್ತಿದ್ದಂತೆ, ಈ ಪ್ರಕರಣದಲ್ಲಿ ಎಷ್ಟು ಮಂದಿಯ ಸಾಕ್ಷಿಯ ಹೇಳಿಕೆ ಪಡೆಯಲಾಗಿದೆ. ಅದರಲ್ಲಿ ಯಾರೆಲ್ಲಾ ಅದನ್ನು ಯಾರು ಒಪ್ಪುತ್ತಾರೆ? ಯಾರು ಒಪ್ಪುವುದಿಲ್ಲ? ಎಂದು ಹೈಕೋರ್ಟ್ ಪ್ರಶ್ನೆ ಮಾಡಿತು.
ಈ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ನಾಗೇಶ್, ಸಂತ್ರಸ್ತೆ ಮಾತ್ರ ಈ ಆರೋಪ ಮಾಡುತ್ತಿದ್ದಾರೆ. ಅವರನ್ನು ಬಿಟ್ಟರೆ ಉಳಿದವರಾರು ಇಲ್ಲ ಎಂದು ಪೀಠದ ಗಮನಕ್ಕೆ ತಂದರು.
ಆಗ ಮಧ್ಯ ಪ್ರವೇಶಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮಕುಮಾರ್, ತಮ್ಮ ವಿರುದ್ಧದ ಆರೋಪವನ್ನು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದರು. ಕೂಡಲೇ ನಾಗೇಶ್ ಅವರು, ಏನು ಒಪ್ಪಿಕೊಂಡಿದ್ದಾರೆ ಎಂಬುದನ್ನು ತೋರಿಸುತ್ತೇನೆ. ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದರು.
ಮುಂದುವರೆದು, “ಸಮಯ ವ್ಯರ್ಥ ಮಾಡಬೇಡಿ. ಏನಿದೆ ಎಂಬುದನ್ನು ಸಂಕ್ಷಿಪ್ತವಾಗಿ ಹೇಳಿ ಎಂದು ಕೋರ್ಟ್ ಕೆಲ ಕಾಲ ವಾದ – ಪ್ರತಿವಾದ ಆಲಿಸಿ, ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿತು.




