ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ 45 ವಾರ್ಡ್ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಮೊಬೈಲ್ ಆಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
6 ರಿಂದ 18 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುತ್ತಿರುವುದು ಮೂಲಭೂತ ಹಕ್ಕು ಆಗಿರುತ್ತದೆ. ಹಾಗೂ ಮಕ್ಕಳ ಉಚಿತ ಶಿಕ್ಷಣ ಹಕ್ಕು ಮಕ್ಕಳ ದಾಖಲಾತಿ ಹಾಗೂ ಹಾಜರಾತಿಗೆ ಸಂಬಂಧಿಸಿದಂತೆ ಈ ಸಂಬಂಧ ಪಾಲಿಕೆಯ 45 ವಾರ್ಡ್ಗಳ ವ್ಯಾಪ್ತಿಯಲ್ಲಿ ಜುಲೈ 22ರಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಮನೆ ಮನೆಗೆ ತೆರಳಿ ಸರ್ವೆ ಕಾರ್ಯವನ್ನು ಮೊಬೈಲ್ ಆಪ್ ಮೂಲಕ ಸ್ವ-ಸಹಾಯ ಸಂಘದ ಸದಸ್ಯರುಗಳು ಕೈಗೊಳ್ಳುತ್ತಾರೆ.
ಮೊಬೈಲ್ ಆಪ್ ಗೆ ಸಂಬಂಧಿಸಿದಂತೆ ಕೇಳುವ ಪೂರ್ಣ ಮಾಹಿತಿಯನ್ನು ಕೊಡುವುದರೊಂದಿಗೆ ಸರ್ವೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.




