ಬೆಂಗಳೂರು: ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಇಂದು ಡಾ.ಬಾಬು ಜಗಜೀವನ ರಾಮ್ ಅವರ ಪುಣ್ಯತಿಥಿ ಅಂಗವಾಗಿ ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಅವರು, ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ದೇಶದಲ್ಲಿ ತೀವ್ರ ಆಹಾರದ ಕೊರತೆಯುಂಟಾಗಿ, ಬೇರೆ ದೇಶಗಳ ಮುಂದೆ ಕೈಚಾಚಬೇಕಾದ ಪರಿಸ್ಥಿತಿ ಇತ್ತು. ಹೊಸ ತಳಿಗಳ ಅಭಿವೃದ್ದಿ ಸೇರಿದಂತೆ ಹಲವು ಕ್ರಮಗಳ ಮೂಲಕ ಜಗಜೀವನರಾಮ್ ಅವರು ಆಹಾರ ಭದ್ರತೆಯನ್ನು ಒದಗಿಸಿದರು ಎಂದರು.
ಜಗಜೀವನರಾಮ್ ಅವರು ರಕ್ಷಣಾ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದರೂ ದಕ್ಷ ಆಡಳಿತ ನೀಡಿದ್ದಾರೆ. ಕಾರ್ಮಿಕರ ಪರವಾಗಿ ಅನೇಕ ಕಾಯ್ದೆಗಳನ್ನು ರಚಿಸಿದ ಕೀರ್ತಿ ಅವರದು. ಬಡವರು, ರೈತರು, ಕೂಲಿ ಕಾರ್ಮಿಕರ ಪರವಾಗಿ ನಿರಂತರವಾಗಿ ಅವರು ಹೋರಾಟ ನಡೆಸಿದ್ದಾರೆ. ಅವರು ತೋರಿದ ಹಾದಿಯಲ್ಲಿ ನಡೆಯುವ ಸಂಕಲ್ಪವನ್ನು ಈ ದಿನ ನಾವು ಮಾಡಬೇಕಾಗಿದೆ ಎಂದರು.
ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಬಾಬು ಜಗಜೀವನರಾಮ್ ಭವನವನ್ನು ಜುಲೈ 13ರಂದು ಲೋಕಾರ್ಪಣೆ ಮಾಡಲಾಗುವುದು. ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಈ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. ಅರ್ಹ ಅಭ್ಯರ್ಥಿಗಳಿಗೆ ವಿಜ್ಞಾನ, ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಸಹ ಈ ಭವನದಲ್ಲಿ ಒದಗಿಸಲಾಗುವುದು ಎಂದರು.



