ಬೆಳಗಾವಿ: ಚಿಕ್ಕೋಡಿ ಲೋಕಸಭಾ ಸದಸ್ಯೆಯಾಗಿ ಆಯ್ಕೆಯಾದ ಪ್ರಿಯಾಂಕ ಜಾರಕಿಹೊಳಿ ಅವರಿಗೆ ಗೋಕಾಕ ನಗರದ ಅವರ ನಿವಾಸಕ್ಕೆ ಭೇಟಿ ನೀಡಿದ ಅಭಿಮಾನಿಗಳು ಅಭಿನಂದನೆಗಳ ಮಹಾಪೂರವನ್ನೇ ಸುರಿಸಿದರು.
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
ಇದೇ ಸಂದರ್ಭದಲ್ಲಿ ಮಾಧ್ಯಮದ ಮಿತ್ರರೊಂದಿಗೆ ಮಾತನಾಡಿದ ಪ್ರಿಯಾಂಕ ಜಾರಕಿಹೊಳಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ನಾನು ಸದಾ ಸಿದ್ಧ. ಕೇಂದ್ರದಿಂದ ಹೆಚ್ಚಿನ ಅನುದಾನ ತರುವ ಮುಖೇನ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕನಸು ನನಸಾಗಿ ಮಾಡುತ್ತೇನೆ ಎಂದರು.
ಜೊತೆಗೆ, ಪಕ್ಷದ ಗೆಲುವಿಗೆ ಸಹಕರಿಸಿದ ಎಲ್ಲ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ವಿವಿಧ ಸಂಘಟನೆಗಳ ಸದಸ್ಯರು ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳು ತಿಳಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನಾಯಕ ರಾಹುಲ್ ಜಾರಕಿಹೊಳಿ ಮತ್ತು ಇತರ ನಾಯಕರು ಹಾಗೂ ಕಾರ್ಯಕರ್ತರು ಹಾಜರಿದ್ದರು.



