ಬೆಂಗಳೂರು: ಪ್ರಸ್ತುತ ರಾಜ್ಯದ 5 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ 13 ತಾಲ್ಲೂಕುಗಳ ವ್ಯಾಪ್ತಿಯ 66 ಗ್ರಾಮಗಳಿಗೆ ದೀರ್ಘಕಾಲೀನ ಸಮಸ್ಯೆ ಹಾಗೂ ನೀರಿನ ಗುಣಮಟ್ಟದ ಸಮಸ್ಯೆಯಿಂದಾಗಿ ಬಾಡಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಪಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಕೃಷ್ಣ ಬೈರೇಗೌಡ, ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 2 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ 5 ನಗರ ಸ್ಥಳೀಯ ಸಂಸ್ಥೆಗಳ 56 ವಾರ್ಡ್ಗಳಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿಯನ್ನು ಗುರಿತಿಸಲು ಸಭೆಯಲ್ಲಿ ಸೂಚನೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಈ ಹಿಂದಿನ ವರ್ಷಗಳಲ್ಲಿ ಕೈಗೊಂಡ ಕ್ರಮಗಳ ಜೊತೆಗೆ ಕೈಗೊಳ್ಳಬಹುದಾದ ಹೆಚ್ಚುವರಿ ಕ್ರಮಗಳ ಕುರಿತು ಸಂಪೂರ್ಣ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಗೆ ಸೂಚಿಸಿದರು.
ಈ ಕುರಿತಂತೆ ಸ್ಪಷ್ಟವಾದ ವರದಿಯನ್ನು ಮುಂದಿನ ಸಚಿವರ ಸಂಪುಟ ಉಪಸಮಿತಿ ಸಭೆಯನ್ನು ಮಂಡಿಸುವಂತೆಯೂ ನಿರ್ದೇಶನ ನೀಡಲಾಯಿತು.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರುಗಳ ಪಿ.ಡಿ. ಖಾತೆಯಲ್ಲಿ (ವಿಪತ್ತು ನಿಧಿ) ಪ್ರಸ್ತುತ ಒಟ್ಟು ರೂ.488.30 ಕೋಟಿಗಳ ಅನುದಾನ ಲಭ್ಯವಿದ್ದು, ಪರಿಹಾರ ಕ್ರಮಕ್ಕೆ ಯಾವುದೇ ಹಣಕಾಸು ಸಮಸ್ಯೆ ಇಲ್ಲ ಎಂಬ ವಿಷಯವನ್ನು ಸಚಿವ ಕೃಷ್ಣ ಬೈರೇಗೌಡ ಅವರು ಉಪ ಸಮಿತಿಯ ಗಮನ ಸೆಳೆದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಹಾಜರಿದ್ದರು.



