ಮೈಸೂರು: ಕಾಂಗ್ರೆಸ್ ಸರ್ಕಾರ ಹೆಣದ ಮೇಲೂ ಹಣ ಸಂಪಾದನೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಮೈಸೂರಿನಲ್ಲಿ ಬಿಜೆಪಿಯಿಂದ ಆರಂಭವಾದ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಹೆಣದ ಮೇಲೆ ಹಾಕಿದ ಹಣವನ್ನು ಎಂದೂ ತೆಗೆಯಬಾರದು. ಆದರೆ ಕಾಂಗ್ರೆಸ್ ಸರ್ಕಾರ ಹೆಣದ ಮೇಲೂ ಹಣ ಸಂಪಾದಿಸುತ್ತಿದೆ. ಬಿಯರ್ ಕುಡಿಯುವವರು ಹೆಚ್ಚುವರಿ 50 ರೂ. ಇಟ್ಟುಕೊಳ್ಳಬೇಕು. ಬೆಂಗಳೂರಿನ ಮನೆಗಳ ಕಸಕ್ಕೂ ತೆರಿಗೆ ಹಾಕಿದ್ದಾರೆ. ಇನ್ನು ಮುಂದೆ ಶೌಚಾಲಯಕ್ಕೂ ಶುಲ್ಕ ವಿಧಿಸಲಿದ್ದಾರೆ. ಸ್ವಲ್ಪ ದಿನಗಳಲ್ಲಿ ಕುಡಿಯುವ ನೀರಿನ ದರ ಏರಿಕೆಯಾಗಲಿದೆ ಎಂದರು.
ಇಂಧನ ಇಲಾಖೆಯಿಂದ ಮನೆಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸಿ, ಅದರಲ್ಲಿ 15 ಸಾವಿರ ಕೋಟಿ ರೂ. ಹಗರಣ ಮಾಡಲಾಗುತ್ತಿದೆ. ಲೂಟಿ ಮಾಡುತ್ತಿರುವ ಈ ಸರ್ಕಾರಕ್ಕೆ ಯಾಕಾದರೂ ಓಟು ಹಾಕಿ ಪಾಪ ಮಾಡಿದ್ದೇವೆ ಎಂದು ಜನರು ಯೋಚಿಸುತ್ತಿದ್ದಾರೆ. ಡೀಸೆಲ್ ದರ ಏರಿಸಿದ್ದು ಕೇಂದ್ರ ಸರ್ಕಾರ ಎಂದು ಒಬ್ಬ ಸಚಿವರು ಹೇಳುತ್ತಾರೆ. ಮತ್ತೊಬ್ಬ ಸಚಿವರಿಗೆ ಕನ್ನಡ ಬರೆಯಲು ಕೂಡ ಬರುವುದಿಲ್ಲ. ಸಚಿವರೆಲ್ಲರೂ ಅಜ್ಞಾನಿಗಳಾಗಿದ್ದಾರೆ. ಇವರೆಲ್ಲರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜ್ಞಾನಿಯಾಗಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುವಾಗ ತೆರಿಗೆ ವಿಧಿಸಲಿಲ್ಲ. ಈಗ ಪ್ರತಿಯೊಂದಕ್ಕೂ ತೆರಿಗೆ ವಿಧಿಸಲಾಗುತ್ತಿದೆ. ಇವರು ಎಂತಹ ವಂಚಕರು ಎಂಬುದು ಇದರಿಂದಲೇ ಗೊತ್ತಾಗುತ್ತದೆ. ವಕ್ಫ್ ಮಂಡಳಿ ರೈತರ ಜಮೀನು ಲೂಟಿ ಮಾಡುವುದನ್ನು ತಪ್ಪಿಸಲು ಪ್ರಧಾನಿ ನರೇಂದ್ರ ಮೋದಿ ಹೊಸ ಮಸೂದೆ ತಂದಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಬೇಕು. ಹಾಗೆಯೇ ಈ ಜನಾಕ್ರೋಶ ಯಾತ್ರೆಯ ಪ್ರತಿಭಟನೆಯನ್ನು ಇನ್ನಷ್ಟು ಮುಂದುವರಿಸಿ ತಾರ್ಕಿಕ ಅಂತ್ಯಕ್ಕೆ ಒಯ್ಯಬೇಕು ಎಂದರು.




