ಬೀಡಿ ಕಾರ್ಮಿಕರ ಸಂಘದಿಂದ ಮನವಿ
ಮಂಗಳೂರು: ನಗರದಿಂದ ಸುಮಾರು 30 ಕಿಮೀ ದೂರದಲ್ಲಿರುವ, ತಾಲೂಕಿನ ಕೊನೆಯ ಗ್ರಾಮವಾದ ಕುಪ್ಪೆಪದವು ಗ್ರಾಮದ ಜನತೆ ಸರಿಯಾದ ಬಸ್ ಪ್ರಯಾಣ ಸೇವೆಯಿಂದ ವಂಚಿತರಾಗಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಖಾಸಗಿ ಬಸ್ ಗಳು ಮಂಗಳೂರು ನಗರದಿಂದ ಕುಪ್ಪೆಪದವು ಗ್ರಾಮಕ್ಕೆ ಸಂಚರಿಸುತ್ತಿದ್ದರೂ, ಅದರ ಪ್ರಮಾಣ ಸಾಲದು. ವಿದ್ಯಾರ್ಥಿಗಳು, ಕೂಲಿಕಾರರು, ವಿವಿಧ ಉದ್ಯೋಗಳಲ್ಲಿ ತೊಡಗಿಸಿಕೊಂಡವರು ಸೇರಿ ಕೈಕಂಬ, ಮಂಗಳೂರು, ಮೂಡಬಿದ್ರೆಯನ್ನು ದೊಡ್ಡ ಪ್ರಮಾಣದಲ್ಲಿ ಕುಪ್ಪೆಪದವು, ಇರುವೈಲು ಹಾಗು ಸುತ್ತಮುತ್ತಲಿನ ಜನತೆ ಅವಲಂಬಿಸಿದ್ದಾರೆ.
ಬೆಳಗ್ಗೆ ಹಾಗು ಸಂಜೆಯ ಹೊತ್ತು ಈಗಿರುವ ಬಸ್ ಗಳಲ್ಲಿ ವಿಪರೀತ ನೂಕುನುಗ್ಗಲು ಇರುತ್ತದೆ. ಮಹಿಳೆಯರು, ವಿದ್ಯಾರ್ಥಿಗಳಿಗೆ ಪ್ರಯಾಣಿಸುವುದೇ ತೀರಾ ತ್ರಾಸದಾಯಕ ಆಗಿರುತ್ತದೆ. ಇದಲ್ಲದೆ, ಮಧ್ಯಾಹ್ನ, ಭಾನುವಾರ ಸೇರಿದಂತೆ ರಜಾದಿನಗಳಲ್ಲಿ, ದಿನದ ಕೊನೆಯ ಟ್ರಿಪ್ ಗಳಲ್ಲಿ ಖಾಸಗಿ ಬಸ್ ಗಳು ಟ್ರಿಪ್ ಕಟ್ ಮಾಡುವುದರಿಂದ ಗ್ರಾಮಸ್ಥರು ಅನುಭವಿಸುವ ಸಮಸ್ಯೆ ದೊಡ್ಡದಿದೆ. ಇದಲ್ಲದೆ, ಸರಕಾರದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಅವಕಾಶದಿಂದಲೂ ನಮ್ಮ ಗ್ರಾಮದ ಮಹಿಳೆಯರು ವಂಚಿತರಾಗಿದ್ದಾರೆ.
ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಮಂಗಳೂರು, ಕುಪ್ಪೆಪದವು ಇರುವೈಲು, ಮೂಡಬಿದ್ರೆ ಮಾರ್ಗವಾಗಿ ಕೆಎಸ್ಆರ್ ಟಿಸಿ ವತಿಯಿಂದ ತಲಾ ಎರಡು ಬಸ್ ಗಳ ಸೇವೆ ಒದಗಿಸಬೇಕು ಎಂದು ಒತ್ತಾಯಿಸಿ ಕುಪ್ಪೆಪದವು ಪ್ರದೇಶ ಬೀಡಿ ಕಾರ್ಮಿಕರ ಸಂಘದ ವತಿಯಿಂದ ಬಿಜೈ ನಲ್ಲಿರುವ ಕೆಎಸ್ ಆರ್ ಟಿಸಿ ವಿಭಾಗೀಯ ಕಚೇರಿಯಲ್ಲಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಸದಾಶಿವ ದಾಸ್, ಕುಪ್ಪೆಪದವು ಬೀಡಿಕಾರ್ಮಿಕರ ಸಂಘದ ಅಧ್ಯಕ್ಷರಾದ ಭವಾನಿ, ಕಾರ್ಯದರ್ಶಿ ವಸಂತಿ ಕುಪ್ಪೆಪದವು, ಕೋಶಾಧಿಕಾರಿ ಕುಸುಮ ಕುಪ್ಪೆಪದವು, ಪದಾಧಿಕಾರಿಗಳಾದ ಬೇಬಿ ನಾಯ್ಕ, ವಾರಿಜ ನೀಲಿ, ಸವಿತಾ ಉಪಸ್ಥಿತರಿದ್ದರು.




