ಕೆಎಎಸ್ ಹುದ್ದೆಗೆ ಡಾ|| ರಾಜಕುಮಾರ್ ಅಕಾಡೆಮಿಯ 75ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆ

4 years ago

ಬೆಂಗಳೂರು: ಡಾ|| ರಾಜಕುಮಾರ್ ಅಕಾಡೆಮಿಯು ಎಲ್ಲಾ ಯಶಸ್ವಿ ಅಭ್ಯರ್ಥಿಗಳನ್ನು ಅಭಿನಂದಿಸಿದೆ.

ಕರ್ನಾಟಕ ಲೋಕ ಸೇವಾ ಆಯೋಗವು ಸೋಮವಾರ ಸಂಜೆ 2017-2018 ರ ಸಾಲಿನ 106 ಗ್ರೂಪ್ ಎ ಮತ್ತು ಗ್ರೂಪ್ ಬಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದು ಈ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ 24 ಆಗಸ್ಟ್ 2020 ರಂದು ನಡೆಸಲಾಗಿದ್ದು, ಮುಖ್ಯ ಪರೀಕ್ಷೆಯನ್ನು ಫೆಬ್ರವರಿ 2021 ರಲ್ಲಿ ನಡೆಸಲಾಯಿತು ಎಂದು ಮಾಹಿತಿ ಹಂಚಿಕೊಂಡಿದೆ.

ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಂದರ್ಶನಕ್ಕೆ ಆಯ್ಕೆಯಾದ 318 ಅಭ್ಯರ್ಥಿಗಳಲ್ಲಿ, ಸುಮಾರು 200ಕ್ಕೂ ಹೆಚ್ಚಿನ ಅಭ್ಯರ್ಥಿಗಳು ಡಾ ರಾಜ್‌ಕುಮಾರ್ ಅಕಾಡೆಮಿಯ ವಿವಿಧ ಕೋರ್ಸುಗಳ ವಿದ್ಯಾರ್ಥಿಗಳಾಗಿರುತ್ತಾರೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಅಂತಿಮ ಫಲಿತಾಂಶದಲ್ಲಿ ಅಕಾಡೆಮಿಯ 75ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದು ಶೇಕಡ 70ಕ್ಕಿಂತ ಹೆಚ್ಚಿನ ಫಲಿತಾಂಶ ನೀಡುವುದರೊಂದಿಗೆ ಸಾರ್ವಕಾಲಿಕ ದಾಖಲೆಯನ್ನು ಸೃಷ್ಟಿಸಲಾಗಿದ್ದು ಇದು ನಿಜಕ್ಕೂ ಹೆಮ್ಮೆಯ ಕ್ಷಣವಾಗಿದೆ. ನೀವು ಸೇವೆ ಸಲ್ಲಿಸಲು ಆ ದೇವರು ನಿಮಗೆ ಇನ್ನೂ ಹೆಚ್ಚು ಶಕ್ತಿ ತುಂಬಲಿ ಎಂದು ನಾವೆಲ್ಲರೂ ಆಶಿಸುತ್ತೇವೆ ಎಂದು ಸಂತಸ ಹಂಚಿಕೊಂಡಿದೆ.

Leave a Reply