ಧರ್ಮಸ್ಥಳ ಮಂಜುನಾಥನ ದರ್ಶನ ಮಾಡುವುದಿಲ್ಲವೆಂದ ದುನಿಯಾ ವಿಜಯ್

3 years ago

#DuniyaVijay #notvisit #Manjunatha #Dharamsthala #Justiceforsoujanya #OdanadiIndia #dharmastla #WeStandWithSowjanya

ಬೆಂಗಳೂರು: ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಹೇಳಿದ್ದಾರೆ.

2012ರಲ್ಲಿ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸೇರಿದಂತೆ ಎಲ್ಲೆಡೆ ಭಾರೀ ಚರ್ಚೆ, ಹೋರಾಟ, ಮನವಿ ಕೊಡುವ ಕೆಲಸ ನಡೆಯುತ್ತಿದೆ. ಸಿಬಿಐ ಕೂಡ ಈ ಪ್ರಕರಣವನ್ನು ಭೇದಿಸಲಾಗದೆ ಬಂಧಿತರನ್ನು ಬಿಡುಗಡೆ ಮಾಡಲಾಗಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಮತ್ತೊಮ್ಮೆ ಸೌಜನ್ಯ ಸಾವಿನ ಕುರಿತು ಕೂಲಂಕಶ ತನಿಖೆಯಾಗಬೇಕು ಎಂಬ ಒತ್ತಾಯ ಕೂಡ ಕೇಳಿ ಬರುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಈ ಪ್ರಕರಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ದುನಿಯಾ ವಿಜಯ್, ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದಿದ್ದಾರೆ. ಜೊತೆಗೆ, ಬುದ್ಧನ ಹೇಳಿಕೆ “ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು” ಎಂಬ ಹೇಳಿಕೆಯನ್ನು ಉದ್ಧರಿಸಿದ್ದಾರೆ.

Leave a Reply