ಕೋರ್ಟ್ ತೀರ್ಪಿಗೆ ತಲೆಬಾಗಿ ಹೊಸ ಬದುಕಿನತ್ತ ಹೆಜ್ಜೆ:
ಅಭಿಮಾನಿಗಳು ಹಾಗೂ ಮಾಧ್ಯಮಗಳಲ್ಲಿ ನಟ ದುನಿಯಾ ವಿಜಯ್ ಕಳಕಳಿಯ ಮನವಿ
ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟ ‘ದುನಿಯಾ’ ವಿಜಯ್ ತಮ್ಮ ವೈವಾಹಿಕ ಬದುಕಿನ ಕಾನೂನು ಪ್ರಕ್ರಿಯೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ತೀರ್ಪನ್ನು ಗೌರವಿಸಿ, ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
- ಬಿಎಂಟಿಸಿ ಪ್ರಯಾಣಿಕರಿಗೆ ಮತ್ತು ನಮ್ಮ ಬೆಂಗಳೂರಿಗೆ ಶುಭ ದಿನ: ಕೃಷ್ಣ ಬೈರೇಗೌಡ
- ₹29,679 ಕೋಟಿ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ
- ಮಾಚಿದೇವ ಅಭಿವೃಧ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತಿಮ್ಮಪ್ಪನ ದೇವಾಲಯದಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು ಎಂಬ ಸುದ್ದಿ ನಿಜವೇ?
- ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
ನ್ಯಾಯಾಂಗದ ಮೇಲೆ ತಮಗಿರುವ ಅಪಾರ ನಂಬಿಕೆಯನ್ನು ವ್ಯಕ್ತಪಡಿಸಿರುವ ಅವರು, ತಮ್ಮ ವೈಯಕ್ತಿಕ ವಿಚಾರದಲ್ಲಿ ಮಾಧ್ಯಮಗಳು ಹಾಗೂ ಅಭಿಮಾನಿಗಳು ಸಂಯಮ ಕಾಯ್ದುಕೊಳ್ಳಬೇಕೆಂದು ವಿನಂತಿಸಿದ್ದಾರೆ.
ನ್ಯಾಯಾಲಯದ ಆದೇಶಕ್ಕೆ ಗೌರವ: “ನ್ಯಾಯಾಲಯದ ಆದೇಶಕ್ಕೆ ಶಿರಸಾಷ್ಟಾಂಗ ಪ್ರಣಾಮಗಳೊಂದಿಗೆ ಶರಣಾಗಿದ್ದೇನೆ. ಕಾನೂನಿನ ಮೇಲಿನ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ ಆದೇಶ ನೀಡಿದ ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಿಗೆ ತಲೆಬಾಗಿದ್ದೇನೆ” ಎಂದು ವಿಜಯ್ ತಿಳಿಸಿದ್ದಾರೆ. ಜೊತೆಗೆ ತಮ್ಮ ಪರ ವಾದ ಮಂಡಿಸಿದ ವಕೀಲರ ತಂಡಕ್ಕೂ ಧನ್ಯವಾದ ಅರ್ಪಿಸಿದ್ದಾರೆ.
ಮಕ್ಕಳ ಹಿತದೃಷ್ಟಿಯಿಂದ ಮೌನ: ಈ ಸೂಕ್ಷ್ಮ ವಿಚಾರದ ಕುರಿತು ಮಾಧ್ಯಮಗಳಲ್ಲಾಗಲಿ ಅಥವಾ ಸಾರ್ವಜನಿಕವಾಗಲಿ ಯಾವುದೇ ಚರ್ಚೆ ನಡೆಸಲು ಇಷ್ಟಪಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನನ್ನ ಹೆಣ್ಣುಮಕ್ಕಳು ವಯಸ್ಕರಾಗಿದ್ದು, ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನ ಗಳಿಸಿದ್ದಾರೆ. ಅವರಿಗೆ ಯಾವುದೇ ಮುಜುಗರವಾಗಬಾರದು” ಎಂಬ ಕಾಳಜಿ ವ್ಯಕ್ತಪಡಿಸಿದ್ದಾರೆ.
ಹೊಸ ಬದುಕಿನತ್ತ ಹೆಜ್ಜೆ: ಮಕ್ಕಳ ಭವಿಷ್ಯ ಹಾಗೂ ಹಿತದೃಷ್ಟಿಯಿಂದ ಕೋರ್ಟ್ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದು, ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಇಡುತ್ತಿರುವುದಾಗಿ ಹೇಳಿದ್ದಾರೆ.
ತಮ್ಮ ಕಷ್ಟ-ಸುಖಗಳಲ್ಲಿ ಸದಾ ಜೊತೆಯಾಗಿ ನಿಂತಿರುವ ಸಮಸ್ತ ಅಭಿಮಾನಿಗಳು ಮತ್ತು ಮಾಧ್ಯಮ ಮಿತ್ರರ ಆಶೀರ್ವಾದ ಹಾಗೂ ಹಾರೈಕೆ ಮುಂದೆಯೂ ಹೀಗೇ ಇರಲಿ ಎಂದು ದುನಿಯಾ ವಿಜಯ್ ಈ ಪೋಸ್ಟ್‌ನಲ್ಲಿ ಕೋರಿದ್ದಾರೆ.


