ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಬೆಂಗಳೂರು ನಗರದ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ನ ನೂತನ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಬಳಿಕ ಪುಲಕೇಶಿನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹಗಳ ಸಮುಚ್ಛಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ ಎಂದರು.
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.
ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದರು.
ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ಅಕ್ರಮ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ ಎಂದರು.
ಪೇದೆಗಳು, ಎಸ್.ಐ ಗಳು, ಇನ್ಸ್‌ಪೆಕ್ಟರ್‌ಗಳೇ ಹೆಚ್ಚೆಚ್ಚು ಕೆಲಸ ಮಾಡುತ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದರು.




