ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿ ಬರುವ ಚಿತ್ರಕಲಾ ಶಿಲ್ಪಿ ಶ್ರೀ ಡಿ.ವಿ ಹಾಲಭಾವಿ ಸ್ಮಾರಕ ಟ್ರಸ್ಟ್ ವತಿಯಿಂದ ಶ್ರೀ ಡಿ.ವಿ.ಹಾಲಭಾವಿ ಅವರ ಜನ್ಮದಿನಾಚರಣೆ ಅಂಗವಾಗಿ ಶ್ರೀ ಡಿ.ವಿ.ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ನವೆಂಬರ್ 29, 2024 ರಂದು ಸಂಜೆ 5.30 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಪ್ರಶಸ್ತಿಗೆ ಭಾಜನರಾಗಿರುವ ಕಲಾವಿದರಿಂದ ಚಿತ್ರಕಲಾ ಪ್ರಾತ್ಯಕ್ಷಿಕೆಯನ್ನು ನವೆಂಬರ 28, 2024 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಕೆಲಗೇರಿಯ ಜೆ.ಎಸ್.ಎಸ್. ಹಾಲಭಾವಿ ಸ್ಕೂಲ್ ಆಫ್ ಆರ್ಟ್ ದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತಿ ವಹಿಸುವರು. ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡುವರು.
ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಹಿರಿಯ ಚಲನಚಿತ್ರ ನಟ ಹಾಗೂ ನಿರ್ದೇಶಕ ಸುರೇಶ್ ಹೆಬ್ಳೀಕರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್.ಚೆನ್ನೂರ ಭಾಗವಹಿಸುವರು.




