ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆಯನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಹಾಸ್ಯನಟನಾಗಿ ಮಾತ್ರವಲ್ಲ, ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದ್ದರು. ಡಾ|| ರಾಜ್ ಕುಮಾರ್ ಮತ್ತು ದ್ವಾರಕೀಶ್ ಜೋಡಿ ಬಹಳ ಚೆನ್ನಾಗಿತ್ತು. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಚಿತ್ರಗಳಲ್ಲಿಯೂ ಅಭಿನಯಿಸಿದ್ದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಜೀವನದಲ್ಲಿ ಬಹಳಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದರೂ ಕನ್ನಡ ಚಿತ್ರ ನಿರ್ಮಾಣ, ನಟನೆಯನ್ನು ಬಿಟ್ಟಿರಲಿಲ್ಲ. ಕಷ್ಟಗಳನ್ನು ಸಹಿಸಿ ಕನ್ನಡ ಚಿತ್ರರಂಗ ಬೆಳೆಯಲು ಕೊಡುಗೆ ನೀಡಿದ್ದಾರೆ.
ದ್ವಾರಕೀಶ್ ಮೈಸೂರಿನ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ರಾಜಕೀಯ, ಸಿನಿಮಾ, ಸಾಮಾಜಿಕ ವಿಚಾರಗಳನ್ನು ಅವರೊಂದಿಗೆ ಚರ್ಚಿಸಿದ್ದೆ.
ಕೆಲ ವರ್ಷಗಳ ಹಿಂದೆ ಅವರ ಧರ್ಮಪತ್ನಿಯವರು ಮೃತಪಟ್ಟ ದಿನವೇ ದ್ವಾರಕೀಶ್ ಅವರೂ ಮೃತಪಟ್ಟಿದ್ದಾರೆ. ಇಬ್ಬರ ಆತ್ಮಕ್ಕೂ ಚಿರಶಾಂತಿ ದೊರಕಲಿ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ದ್ವಾರಕೀಶ್ ಅವರು ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಎರಡು ಕಣ್ಣುಗಳನ್ನು ದಾನಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅಂಥ ವ್ಯಕ್ತಿಯನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಮಾತ್ರವಲ್ಲ ಕರುನಾಡು ಬಡವಾಗಿದೆ.
– ಸಿದ್ದರಾಮಯ್ಯ , ಸಿಎಂ




