ಹಾಸನ: ಕಾಂಗ್ರೆಸ್ ನಾಯಕರು ಮುಸ್ಲಿಮರ ಮತಗಳ ಋಣದಲ್ಲಿ ಇರುವುದರಿಂದ ಗಲಭೆ ವಿಚಾರದಲ್ಲಿ ಗಲಭೆಕೋರರ ಪರ ಹೇಳಿಕೆ ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಆದಿಚುಂಚನಗಿರಿ ಮಠದ ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಸಕಲೇಶಪುರ ಪಟ್ಟಣದಲ್ಲಿ ನಡೆದ, ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು.
ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದ ಗಲಭೆಯ ವಿಚಾರದಲ್ಲಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಒಂದು ದಾರಿ ಹಿಡಿದರೆ, ಸಿಎಂ ಸಿದ್ದರಾಮಯ್ಯ ಮತ್ತೊಂದು ದಾರಿ ಹಿಡಿದಿದ್ದಾರೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿ, ಪೊಲೀಸರನ್ನು ಗಾಯಗೊಳಿಸುವುದು ಹೊಸತಲ್ಲ ಎಂದರು.
ಮೈಸೂರಿನ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸದೇ ಇದ್ದಲ್ಲಿ ಇಡೀ ಪೊಲೀಸ್ ಠಾಣೆ ಧ್ವಂಸವಾಗುತ್ತಿತ್ತು. ಪೊಲೀಸರು ಬಹಳ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದಾರೆ. ಮುಸ್ಲಿಮರ ಮತಗಳ ಭಿಕ್ಷೆಯ ಋಣದಲ್ಲಿ ಕಾಂಗ್ರೆಸ್ ಇರುವುದರಿಂದ, ಸಚಿವರು, ಮುಖ್ಯಮಂತ್ರಿ ಈ ರೀತಿ ವರ್ತಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಬೆಂಕಿ ಹಚ್ಚಲು ಏನೇನು ಹೇಳಬೇಕೋ ಅದನ್ನು ಹೇಳಿದ್ದಾರೆ. ಸಚಿವರು ಪೊಲೀಸರಿಗೆ ನಿಂದಿಸಿದ್ದಾರೆ ಎಂದರು.
ನಾಡಪ್ರಭು ಕೆಂಪೇಗೌಡರು ಸಾಮಂತ ರಾಜರಾಗಿದ್ದರು. ರಾಜಧಾನಿ ಬೆಂಗಳೂರನ್ನು ನಿರ್ಮಿಸುವಾಗ ಎಲ್ಲ ಸಮುದಾಯಗಳಿಗಾಗಿ ಪ್ರತ್ಯೇಕವಾದ ಪೇಟೆಗಳನ್ನು ನಿರ್ಮಾಣ ಮಾಡಿದ್ದರು. ರಾಜಧಾನಿ ಬೆಂಗಳೂರನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರನ್ನು ಸ್ಮರಿಸಲು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬಿಜೆಪಿ ಸರ್ಕಾರದಿಂದ ಕಂಚಿನ ಪ್ರತಿಮೆ ನಿರ್ಮಿಸಲಾಗಿತ್ತು. ವಿಧಾನಸೌಧದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಇರಲಿಲ್ಲ. ನಾನು ಕಂದಾಯ ಸಚಿವನಾಗಿದ್ದಾಗ ಪ್ರತಿಮೆ ನಿರ್ಮಿಸಲಾಗಿತ್ತು. ಈಗ ಸಕಲೇಶಪುರದಲ್ಲಿ ಪ್ರತಿಮೆ ನಿರ್ಮಾಣವಾಗುತ್ತಿರುವುದು ಸಂತಸ ತಂದಿದೆ. ರೈತ ಸಮುದಾಯದವರು ಈ ಮೂಲಕ ಕೆಂಪೇಗೌಡರನ್ನು ಸ್ಮರಿಸಿದ್ದಾರೆ ಎಂದರು.





One Response
ಪ್ರತಿಮೆ ಯಾರದ್ರೂ ನಿರ್ಮಿಸಬಹುದು, ಅದು ಸಾರ್ವಜನಿಕರಿಗೆ ಸೇರಿದ್ದು, ಸಾರ್ವಜನಿಕರ ಹಣದಿಂದ ಮಾಡಿದ್ದು, ಸಾರ್ವಜನಿಕರು ಅವರ ಇಚ್ಛಾನುಸಾರ ಮತ ಹಾಕಿ ಸರ್ಕಾರ ರಚಿಸಲು ಅನುಮತಿ ನೀಡಿದ್ದಾರೆ, ಇದು ಯಾರ ಋಣದ ಮೇಲೆ ನಿಂತಿಲ್ಲ, ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಬೇಕು, ಸಾರ್ವಜನಿಕರಿಗೋಸ್ಕರ ಯಾವ ಸರ್ಕಾರ ಕೆಲಸ ಮಾಡುತ್ತೆ ಅದೇ ಸರ್ಕಾರ ಮರು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೆ