ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ನಡೆಯುತ್ತಿದ್ದು, ಎಸ್‌ಐಆರ್ ಪ್ರಕ್ರಿಯೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಕೇಂದ್ರ ಚುನಾವಣಾ ಆಯೋಗ ಇಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಎಸ್‌ಐಆರ್‌ಗೆ ಅಧಿಕಾರಿಗಳು ಸ್ಪಂದಿಸದೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಮಸೀದಿ, ಕಲ್ಯಾಣ ಮಂಟಪ ಮೊದಲಾದ ಕಡೆ ಅರ್ಜಿಗಳನ್ನು ನೀಡುತ್ತಿದ್ದಾರೆ. ವಿದೇಶಿಯರು ಸೇರಿದಂತೆ ಮತದಾರರಲ್ಲದವರ ಹೆಸರು ರದ್ದಾಗುತ್ತಿಲ್ಲ. ವಿಳಂಬ ಮಾಡಿ, ತಪ್ಪು ಮಾಡಿ, ಯಾರ ಹೆಸರನ್ನೂ ತೆಗೆಯುವುದು ಬೇಡ ಎಂದು ಸರ್ಕಾರ ಸೂಚನೆ ನೀಡಿದೆ. ಕಾಂಗ್ರೆಸ್‌ನ ಸಚಿವರನ್ನು ಕೇಳಿದರೆ, ಇದು ನಮ್ಮ ಕೆಲಸವಲ್ಲ ಎಂದು ಹೇಳಿದ್ದಾರೆ. ಆದರೆ ಇದೇ ಸರ್ಕಾರ ಎಸ್‌ಐಆರ್ ಸಿದ್ಧತೆ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದೆ ಎಂದರು.
ಸರ್ಕಾರದ ಕುತಂತ್ರದಿಂದಾಗಿ ಎಸ್‌ಐಆರ್ ಹಳ್ಳ ಹಿಡಿಯುತ್ತಿದೆ. ಈ ಪ್ರಕ್ರಿಯೆಯ ಘನತೆಯನ್ನು ಕಾಪಾಡುವ ಕೆಲಸ ಆಗಬೇಕಿದೆ. ಇದಕ್ಕಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಆಕ್ಷೇಪಿಸಿದ್ದೇನೆ. ಕೂಡಲೇ ಚುನಾವಣಾ ಆಯೋಗ ಇಲ್ಲಿನ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಅಮಾನತು ಮಾಡಬೇಕು. ರಸ್ತೆ, ಬೀದಿಗಳಲ್ಲಿ ಅರ್ಜಿ ನೀಡಿರುವ ಕಡೆ ಪುನರ್ ಪರಿಶೀಲನೆ ಮಾಡಬೇಕು. ಪಶ್ಚಿಮ ಬಂಗಾಳದಲ್ಲಾದಂತೆ ಇಲ್ಲಿ ಕೂಡ ಎಸ್‌ಐಆರ್ ನಡೆಯಬೇಕಿದೆ. ರಾಜ್ಯದಲ್ಲಿ ಸುಮಾರು 20 ಲಕ್ಷ ಬಾಂಗ್ಲಾ ನಿವಾಸಿಗಳಿದ್ದಾರೆ ಎಂಬ ಅನುಮಾನವಾಗಿದೆ. ಅವರ ಹೆಸರು ಮತದಾರರ ಪಟ್ಟಿಗೆ ಸೇರದಂತೆ ಎಚ್ಚರ ವಹಿಸಬೇಕು. ಇಲ್ಲವಾದರೆ ಅವರು ಕೂಡ ರಾಜ್ಯದ ಮತದಾರರಾಗುವ ಅಪಾಯವಿದೆ ಎಂದರು.




