ಬೆಂಗಳೂರು: ವಿದ್ಯುತ್ ಮತ್ತು ಹೈಡ್ರೋಜನ್ ಚಾಲಿತ ವಾಹನ ತಯಾರಿಕೆ ವಲಯಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಆಕರ್ಷಿಸಿ, 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯ ಪರಿಸರಸ್ನೇಹಿ ಸಾರಿಗೆ ನೀತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್, ಮುಂದಿನ ಐದು ವರ್ಷಗಳ ಅವಧಿಯ ಸಾರಿಗೆ ನೀತಿಯನ್ನು ಬಿಡುಗಡೆ ಮಾಡಿದರು.
ದೇಶದ ಇ.ವಿ.ವಲಯದಲ್ಲಿ ರಾಜ್ಯ 3ನೇ ಸ್ಥಾನದಲ್ಲಿದ್ದು, ನಮ್ಮಲ್ಲಿ 2.50 ಲಕ್ಷ ಇ.ವಿ.ಚಾಲಿತ ವಾಹನಗಳಿವೆ. ಬ್ಯಾಟರಿ ಪ್ಯಾಕ್, ಕೋಶಗಳ ತಯಾರಿಕೆ, ಬಿಡಿಭಾಗಗಳ ಉತ್ಪಾದನೆ, ಒಇಎಂ, ಚಾರ್ಜಿಂಗ್, ಪರೀಕ್ಷಾರ್ಥ ಮೂಲಸೌಕರ್ಯ ಹಾಗೂ ಆರ್ & ಡಿ ಇವುಗಳಿಗೆ ಈಗಾಗಲೇ 25 ಸಾವಿರ ಕೋಟಿ ರೂ. ಬಂದಿದೆ. ಹೊಸ ನೀತಿಯಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಮತ್ತು ಹೈಡ್ರೋಜನ್ ಕೇಂದ್ರಗಳ ಜಾಲದ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಜೊತೆಗೆ ಈಗ ಓಡಾಡುತ್ತಿರುವ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳ ರೆಟ್ರೋ-ಫಿಟ್ಟಿಂಗ್ ಪ್ರೋತ್ಸಾಹಿಸಲಾಗುವುದು ಎಂದರು.
ಬೆಂಗಳೂರಿನಲ್ಲಿ ಬಿಎಂಟಿಸಿ ವ್ಯಾಪ್ತಿಯ ಹೊರಗೆ ಕಡಿಮೆ ದೂರದಲ್ಲಿರುವ ಸೇವೆಗಳಿಗೆ ಇ.ವಿ. ಬಸ್ ಸೇವೆಗಳನ್ನು ಹೆಚ್ಚಿಸಲಾಗುವುದು. ಜತೆಗೆ ಇ-ಕಾಮರ್ಸ್ ಮತ್ತು ವಿತರಣಾ ಕಂಪನಿಗಳು ತಮ್ಮ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು 2030ರ ವೇಳೆಗೆ ಇ.ವಿ/ಹೈಡ್ರೋಜನ್ ಚಾಲಿತವಾಗಿ ಬದಲಿಸಿಕೊಳ್ಳಲು ಒತ್ತು ಕೊಡಲಾಗಿದೆ. ಅಲ್ಲದೆ ನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಘನತ್ಯಾಜ್ಯ ನಿರ್ವಹಣೆಗೆ ಇರುವ ವಾಹನಗಳನ್ನು ಕೂಡ ರೂಪಾಂತರಿಸಿ ಕೊಳ್ಳುವಂತೆ ಮಾಡಲಾಗುವುದು. ಖಾಸಗಿ ಕಂಪನಿಗಳು ಮತ್ತು ಶಾಲಾವಾಹನಗಳಿಗೂ ಇದನ್ನು ಅನ್ವಯಿಸಲಾಗುವುದು ಎಂದರು.




