ಬಳ್ಳಾರಿ: ಮಹಿಳೆಯರು ಬಿಡುವಿನ ಸಮಯದಲ್ಲಿ ತಮ್ಮ ಕೃಷಿ ಚಟುವಟಿಕೆ ಜೊತೆಗೆ ಕೃಷಿ ಹೊಂಡದಲ್ಲಿ ಮೀನು ಸಾಕಾಣಿಕೆ ಮಾಡುವುದರಿಂದ ತಮ್ಮ ಕುಟುಂಬ ಆರ್ಥಿಕ ಅಭಿವೃದ್ಧಿಯಾಗುವುದು ಎಂದು ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಗಿರಿಜಾ ಶಂಕರ ಹೇಳಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಆವರಣದಲ್ಲಿ ಏರ್ಪಡಿಸಿದ್ದ ಸ್ವ ಸಹಾಯ ಸಂಘದ ಮಹಿಳೆಯರಿಗೆ 10 ದಿನಗಳ ಉಚಿತ ಮೀನು ಸಾಕಾಣಿಕೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Read more: ಮೀನು ಸಾಕಾಣಿಕೆಯಿಂದ ಆರ್ಥಿಕ ಅಭಿವೃದ್ಧಿಮಿನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಮಾತನಾಡಿ, ಮೀನು ಆರೋಗ್ಯಕ್ಕೆ ಉತ್ತಮ ಆಹಾರವಾಗಿದ್ದು, ಪ್ರತಿಯೊಂದು ದೇಹದಲ್ಲಿರುವ ಕೊಲೆಸ್ಟರಾಲ್ ಅನ್ನು ಸಮತೋಲನದಲ್ಲಿ ಇಡುತ್ತದೆ. ಇದನ್ನು ಔಷಧಿ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ಭೀಮಪ್ಪ.ಕೆ ಲಾಳಿ, ವಿನೋದ ಕುಮಾರ.ಸಿ., ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೆಸಾಬ್.ಎಚ್ ಎರಿಮನಿ, ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ ಸಿಬ್ಬಂದಿಗಳಾದ ರಾಜೇಂದ್ರ, ವಿಜಯ ಕುಮಾರ, ರಘುವರ್ಮ, ಉಪನ್ಯಾಸಕರಾದ ದಿನೇಶ್, ಸಿದ್ದಲಿಂಗಮ್ಮ, ಸಂತೋಷ ಕುಮಾರ್ ಸೇರಿದಂತೆ ಮಹಿಳಾ ಶಿಬಿರಾರ್ಥಿಗಳು ಇನ್ನಿತರರು ಹಾಜರಿದ್ದರು.



