ಬೆಂಗಳೂರು: ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿಗಳಿಗೆ ಸೇರಿದ 26.27 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ.
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
ಪ್ರಕರಣದ ಆರೋಪಿಗಳಾದ ಬಿ.ಕೆ.ನಾಗರಾಜಪ್ಪ. ಆರ್.ಲೀಲಾವತಿ ಮತ್ತು ಇತರೆ ಆರೋಪಿಗಳಿಗೆ ಸೇರಿದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದ್ದು, ತನಿಖೆ ಮುಂದುವರೆಸಿದೆ.
ಭೋವಿ ಸಮುದಾಯದ ಅಭ್ಯುದಯಕ್ಕೆ ಸರ್ಕಾರ ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಸಾರ್ವಜನಿಕರ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂಪಾಯಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದ ಆರೋಪ ಕೇಳಿಬಂದಿತ್ತು.
ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿದಂತೆ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲಾಗಿದ್ದವು.
ಪ್ರಕರಣದ ತನಿಖೆಯನ್ನು ಸಿಐಡಿ ಮತ್ತು ಲೋಕಾಯುಕ್ತ ಕೂಡ ನಡೆಸಿವೆ. ಸಿಐಡಿ ತನಿಖೆ ವೇಳೆ 2018-2023ರವರೆಗೆ ಐದು ವರ್ಷಗಳಲ್ಲಿ ಸುಮಾರು 90 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ನಡೆದಿರುವುದು ಬಯಲಾಗಿತ್ತು.



