ಬೆಂಗಳೂರು: ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅಕ್ರಮ ಹಣಕಾಸು ವಹಿವಾಟು ಆರೋಪದಲ್ಲಿ ಪರಮೇಶ್ವರ್ ಅವರ ಒಡೆತನದ ವಿದ್ಯಾಸಂಸ್ಥೆಗಳು ಮತ್ತು ಅವುಗಳ ಹಿರಿಯ ಸಿಬ್ಬಂದಿ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬುಧವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ 30ಕ್ಕೂ ಹೆಚ್ಚು ಸಿಬ್ಬಂದಿ ಪ್ರತ್ಯೇಕವಾಗಿ ತುಮಕೂರಿನ ಹೆಗ್ಗೆರೆಯಲ್ಲಿರುವ ಸಿದ್ದಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆ, ಮರಳೂರು ದಿಣ್ಣೆಯಲ್ಲಿರುವ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು, ಹೆಗ್ಗೆರೆಯಲ್ಲಿರುವ ಪರಮೇಶ್ವರ್ ಅವರ ಹುಟ್ಟೂರಿನ ಮನೆ, ತುಮಕೂರಿನ ಹೊರವಲಯದಲ್ಲಿರುವ ಹಳೆಯ ಎಚ್ಎಂಎಸ್ ಕಾಲೇಜು, ಮತ್ತು ನೆಲಮಂಗಲದ ಬಳಿಯಿರುವ ಸಿದ್ದಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ದಾಳಿ ವೇಳೆ ಈ ಪ್ರದೇಶಗಳಲ್ಲಿ ಸಾರ್ವಜನಿಕ ಹೋರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದ ಅಧಿಕಾರಿಗಳು, ಸ್ಥಳೀಯ ಪೊಲೀಸರ ನೆರವಿನೊಂದಿಗೆ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಕೆಲವು ಲೆಕ್ಕಪತ್ರಗಳನ್ನು ಪರಿಶೀಲನೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಚಿನ್ನ ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿರುವ ರನ್ಯಾರಾವ್ ಪ್ರಕರಣ ಹಾಗೂ ಇತ್ತೀಚೆಗೆ ಪರಮೇಶ್ವರ ಅವರು ಖರೀದಿಸಿರುವ ಎಚ್ಎಂಎಸ್ ಎಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ.
ಇತ್ತೀಚೆಗೆ ಪರಮೇಶ್ವರ್ ಅವರು ತುಮಕೂರಿನ ಹೊರವಲಯದಲ್ಲಿರುವ ಎಚ್ ಎಂ ಎಸ್ ಇಂಜಿನಿಯರಿಂಗ್ ಕಾಲೇಜನ್ನು ಕಾಂಗ್ರೆಸ್ ಮಾಜಿ ಶಾಸಕ ಶಫಿ ಅಹಮ್ಮದ್ ಅವರಿಂದ ಖರೀದಿಸಿದ್ದರು. ಈ ವೇಳೆ ಭಾರಿ ಪ್ರಮಾಣದ ಹಣಕಾಸಿನ ವಹಿವಾಟು ನಡೆದಿತ್ತು ಎಂನ್ನಲಾಗಿದೆ.
ಜೊತೆಗೆ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ವಸತಿ ಶಾಲೆಯೊಂದನ್ನು ಪರಮೇಶ್ವರ್ ಆರಂಭಿಸಿದ್ದರು. ಜೊತೆಗೆ ಕೆಲವರ ಆಸ್ತಿಗಳ ವಹಿವಾಟುಗಳು ನಡೆದಿರುವ ಮಾಹಿತಿಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಿದ್ದಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆ ಹಾಗೂ ಇಂಜಿನಿಯರಿಂಗ್ ಕಾಲೇಜಿಗೆ ದೇಶದ ವಿವಿಧ ರಾಜ್ಯಗಳಿಂದಷ್ಟೇ ಅಲ್ಲದೆ ವಿದೇಶಿ ವಿದ್ಯಾರ್ಥಿಗಳು ಕೂಡ ಪ್ರವೇಶ ಪಡೆಯುವುದು ಸಾಮಾನ್ಯ ಸಂಗತಿ ಆಗಿದೆ. ಈ ಸಂದರ್ಭದಲ್ಲಿ ಬೇರೆಬೇರೆ ಸ್ವರೂಪಗಳಲ್ಲಿ ಹಣಕಾಸಿನ ವಹಿವಾಟುಗಳು ನಡೆಯುತ್ತವೆ. ಅದರಲ್ಲಿ ಕೆಲವು ಪಿಎಂಎಲ್ಎ ಕಾಯ್ದೆಗೆ ವ್ಯಾಪ್ತಿಗೊಳಪಡಲಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯಾಚರಣೆ ನಡೆಸಿವೆ ಎಂದು ತಿಳಿದುಬಂದಿದೆ.
ಇನ್ನು ತಮ್ಮ ಒಡೆತನದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಲು ಗೃಹ ಸಚಿವ ಪರಮೇಶ್ವರ್ ನಿರಾಕರಿಸಿದರೆ, ಡಿಸಿಎಂ ಡಿ ಕೆ ಶಿವಕುಮಾರ್, ಇದು ರಾಜಕೀಯ ಪ್ರೇರಿತ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಮೇಶ್ವರ್ ಅವರು ಪ್ರಾಮಾಣಿಕ ಮತ್ತು ಸಜ್ಜನ ರಾಜಕಾರಣಿ. ಅವರು ಯಾವುದೇ ರೀತಿಯ ತಪ್ಪು ಮಾಡಿಲ್ಲ ಎನ್ನುವುದು ನನ್ನ ಬಲವಾದ ನಂಬಿಕೆ ಅವರ ಸಂಸ್ಥೆಯಲ್ಲಿ ಬೇರೆ ಯಾರೋ ಮಾಡಿರುವ ವಹಿವಾಟಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದರು.
ಈ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಜಾರಿ ನಿರ್ದೇಶನಾಲಯ, ಸಿಬಿಐ ಸ್ವಾಯತ್ತ ಸಂಸ್ಥೆಗಳು. ಅವು ತಮ್ಮ ಕೆಲಸ ತಾವು ಮಾಡುತ್ತಿರುತ್ತವೆ. ಅವು ನಡೆಸುವ ದಾಳಿಗಳು ರಾಜಕೀಯ ಪ್ರೇರಿತ ಎನ್ನಲಾಗದು ಎಂದರು.
ಇ.ಡಿ., ಸಿಬಿಐ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸ್ಥಾಪಿಸಿದ ಸಂಸ್ಥೆಗಳು. ಆದಾಯ ಮೀರಿ ಆಸ್ತಿಯಿದ್ದರೆ ಅವು ಪರಿಶೀಲಿಸುತ್ತವೆ. ಅವು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಂಥ ನೋಡಲ್ಲ. ಅಲ್ಲಿ ಅಂಥದ್ದು ಏನೂ ಸಿಗದಿದ್ದರೆ ಮುಗಿಯಿತು. ಭಯ ಯಾಕೆ ಎಂದರು.
ಅವು ಕೆಲಸ ಮಾಡದಿದ್ದರೆ ತಪ್ಪು. ಅದನ್ನು ಪ್ರಶ್ನಿಸಬೇಕು. ಆದರೆ, ದಾಳಿ ನಡೆಸಿದಾಗ ಪ್ರಶ್ನಿಸಿದರೆ ಹೇಗೆ? ಅವುಗಳಿಂದ ತೊಂದರೆ ಆಗುತ್ತಿದ್ದರೆ, ಅವುಗಳನ್ನು ತೆಗೆದುಹಾಕುವಂತೆ ಕಾಂಗ್ರೆಸ್ ಪತ್ರ ಬರೆಯಲಿ ಎಂದರು.




