ಬೆಂಗಳೂರು: ಬರೋಬರಿ 50 ಕೋಟಿ ರೂ.ಗಳಿಗೆ ವಿಶ್ವದಲ್ಲೇ ದುಬಾರಿಯಾಗಿರುವ ಸಿಂಹದಂತಿರುವ ಶ್ವಾನವನ್ನು ಖರೀದಿ ಮಾಡಿದ್ದೇನೆ ಎಂದು ಬೀಗುತ್ತಿದ್ದ ಶ್ವಾನ ಪ್ರೇಮಿ ಸತೀಶ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
ಸತೀಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಯ ಬೆಲೆ 50 ಕೋಟಿ ಎನ್ನುವುದು ಸುಳ್ಳು ಎಂಬುದು ಗೊತ್ತಾಗಿದೆ.
ಸತೀಶ್ 50 ಕೋಟಿ ರೂ. ಕೊಟ್ಟು ಶ್ವಾನವೊಂದನ್ನು ಖರೀದಿ ಮಾಡಿರುವಿದಾಗಿ ಹೇಳಿಕೊಂಡಿದ್ದರು. ಕಾಡು ತೋಳ ಮತತ್ತು ಕಕೇಶಿಯನ್ ಶೆಫರ್ಡ್ ತಳಿಯ ಮಿಶ್ರಣವಾದ ಈ ನಾಯಿಯನ್ನು ತೋಳನಾಯಿ ಎಂದೂ ಕರೆಯಲಾಗುತ್ತದೆ.
ನಗರದ ಸತೀಶ್ ಹಲವು ಶ್ವಾನ ತಳಿ ಸಂಘಗಳನ್ನು ಮುನ್ನಡೆಸುತ್ತಿದ್ದಾರೆ. ಹಲವು ವರ್ಷಗಳ ಹಿಂದೆ ನಾಯಿ ಸಾಕುವುದನ್ನು ಬಿಟ್ಟಿದ್ದರೂ ಆಗಾಗ್ಗೆ ಅಪರೂಪದ ನಾಯಿಗಳೊಂದಿಗೆ ಪ್ರದರ್ಶನಕ್ಕೆ ಬರುತ್ತಿರುತ್ತಾರೆ. ಅಲ್ಲದೇ ಸತೀಶ್ ಯಾವುದೇ ಕಾರ್ಯಕ್ರಮಕ್ಕೆ ತಮ್ಮ ಅಪರೂಪದ ಶ್ವಾನದೊಂದಿಗೆ ಹೋದರೂ ಅದಕ್ಕೆ ನಿರ್ದಿಷ್ಟ ಮೊತ್ತವನ್ನು ಪಡೆಯುವುದಾಗಿ ಈ ಹಿಂದೆ ಹೇಳಿಕೊಂಡಿದ್ದರು.
ಕ್ಯಾಡಾಬೊಮ್ಸ್ ಹೇಡರ್ ಹೆಸರಿನ ಕಕೇಷ್ಯನ್ ಶೆಫರ್ಡ್ ಶ್ವಾನವು ಬರೋಬ್ಬರಿ 100 ಕೆ.ಜಿ ತೂಕವಿದೆ. ನೋಡಲು ಸಿಂಹದಂತೆಯೇ ಕಾಣುವ ಈ ಶ್ವಾನದ ತಲೆಬುರುಡೆ ಗಾತ್ರ 38 ಇಂಚುಗಳಿದ್ದು, ಭುಜಗಳು 34 ಇಂಚುಗಳಿವೆ. ಅಲ್ಲದೇ ಶ್ವಾನದ ಕಾಲುಗಳು 2 ಲೀಟರ್ ಜ್ಯೂಸ್ ಬಾಟಲಿ ಗಾತ್ರದಷ್ಟು ದೊಡ್ಡದಾಗಿವೆ.
ಕ್ಯಾಸ್ಪಿಯನ್ ಮತ್ತು ಕಪ್ಪು ಸಮುದ್ರ ಮಧ್ಯೆ ಇರುವ ಕಕೇಷ್ಯಾ ಪ್ರಾಂತ್ಯದ ಬಳಿ ಇರುವ ಕಕೇಷಿಯನ್ ಶೆಫರ್ಡ್ ಶ್ವಾನವನ್ನು ಜಾನುವಾರುಗಳ ರಕ್ಷಣೆಗೆ ಸಾಕಲಾಗುತ್ತದೆ. ಈ ತಳಿಯ ನಾಯಿ ಜಾರ್ಜಿಯಾ, ಅರ್ಮೇನಿಯಾ, ಅಜೆರ್ಬೈಜಾನ್, ಒಸ್ಸೆಟಿಯಾ, ಸರ್ಕಾಸಿಯಾ, ಟರ್ಕಿ, ರಷ್ಯಾ ಮತ್ತು ಡಾಗೆಸ್ತಾನ್ ದೇಶಗಳಲ್ಲಿ ಕಾಣಿಸುತ್ತವೆ. ಭಾರತದಲ್ಲಿ ಅಪರೂಪ ಎಂದು ಸತೀಶ್ ಈ ಹಿಂದೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹೇಳಿಕೊಂಡಿದ್ದರು.




