ಕಲಬುರಗಿ ಮಹಾನಗರವು ದಿನೇ ದಿನೇ ಕೈಗಾರಿಕೆ ಹಾಗೂ ವಾಣಿಜ್ಯ ಕ್ಷೇತ್ರಗಳಲ್ಲಿ ಗಣನೀಯವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದ್ದರಿಂದ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೇರೆ ಮಹಾನಗರಗಳಂತೆ ನಮ್ಮ ಪಾಲಿಕೆ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಗರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಕಟಿಬದ್ದವಾಗಿದ್ದು, ಈ ಹಿನ್ನಲೆಯಲ್ಲಿ ನೀಲನಕ್ಷೆಯನ್ನು ಸಿದ್ಧಪಡಿಸಲಾಗುತ್ತಿದೆ. ಸಾರ್ವಜನಿಕರ ಹಿತದೃಷ್ಟಿ ಹಾಗೂ ಆರ್ಥಿಕ ಅಭಿವೃದ್ಧಿಯನ್ನು ಪರಿಗಣಿಸಿ ಅಧಿಕಾರಿಗಳೊಂದಿಗೆ ಹಾಗೂ ಸಾರ್ವಜನಿಕ ವಲಯದ ವಿವಿಧ ಸಂಘ ಸಂಸ್ಥೆ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳೊಂದಿಗೆ ಚರ್ಚಿಸಿ ನಗರವನ್ನು ವಾಣಿಜ್ಯ ನಗರವನ್ನಾಗಿ ಅಭಿವೃದ್ಧಿ ಪಡಿಸಲು ನಮ್ಮ ಸರ್ಕಾರ ಪರಿಶ್ರಮಿಸುತ್ತಿದೆ.
ಸಾರ್ವಜನಿಕರ ಹಿತದೃಷ್ಟಿ ಹಾಗೂ ಆರ್ಥಿಕ ಬೆಳವಣಿಗೆಗಳ ಹಿನ್ನಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡಗಳ ಎತ್ತರವನ್ನು 11. 5 ಮೀಟರ್’ಗಳಿಂದ 15 ಮೀಟರ್ ಗಳವರೆಗೆ ಏರಿಸುವ ಉದ್ದೇಶದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯಿದೆ ಕಲಂ 13 (ಇ) ಅಡಿಯಲ್ಲಿ ವಲಯ ನಿಯಮಗಳಿಗೆ ತಿದ್ದುಪಡಿ ತರಲು ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲಾಗಿದೆ. ಪರಿಣಾಮವಾಗಿ ನಗರಾಭಿವೃದ್ಧಿ ಇಲಾಖೆ ನಿಯಮಾವಳಿಗೆ ಅಗತ್ಯ ತಿದ್ದುಪಡಿ ತರಲು ಕರಡು ಅಧಿಸೂಚನೆಯನ್ನು ಆಗಸ್ಟ್ 26 ರಂದು ಹೊರಡಿಸಲಾಗಿದ್ದು, 30 ದಿನಗಳ ಒಳಗೆ ಏನಾದರು ಆಕ್ಷೇಪಣೆ ಹಾಗೂ ಸಲಹೆಗಳಿದ್ದರೆ ಸಲ್ಲಿಸುವಂತೆ ಸಾರ್ವಜನಿಕರಿಗೆ ಕೋರಲಾಗಿದೆ.
ನಗರದಲ್ಲಿ ಜನಸಾಂದ್ರತೆ ಹೆಚ್ಚಾಗುತ್ತಿದ್ದು ನಿವೇಶನಗಳ ದರ ಏರಿಕೆಯಾಗಿದೆ. ಮಧ್ಯಮ ವರ್ಗದ ಜನರ ಅನುಕೂಲತೆ ಹಾಗೂ ಆರ್ಥಿಕ ಅಭಿವೃದ್ದಿಗಾಗಿ ಬಹುಮಹಡಿ ಕಟ್ಟಡಗಳಿಗೆ ಪ್ರೋತ್ಸಾಹಿಸಬೇಕಿದೆ. ಮಹಾನಗರದಲ್ಲಿ ಹೆಚ್ಚು ಬಹುಮಹಡಿ ಕಟ್ಟಡಗಳು ನಿರ್ಮಾಣಗೊಂಡರೆ ಸಾರ್ವಜನಿಕರಿಗೆ ಅನುಕೂಲವಾಗುವುದರ ಜೊತೆಗೆ ನಗರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ




