ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಷಯ ಎಲ್ಲಿಯೂ ಚರ್ಚೆಗೆ ಬಂದಿಲ್ಲ. ರಾಜಕೀಯ ಕಾರಣಕ್ಕಾಗಿ ವಿಪಕ್ಷಗಳು ಈ ವಿಷಯ ಪ್ರಸ್ತಾಪಿಸುತ್ತಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ಖರೀದಿಗೆ ಈಗಲೂ ಪ್ರಯತ್ನ ಮುಂದುವರೆದಿದೆ ಎಂಬ ಆರೋಪವನ್ನು ಪುನರುಚ್ಚರಿಸಿದರು.
ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಈಗಲೂ ಪ್ರಯತ್ನ ಮಾಡುತ್ತಿದೆ. ಆದರೆ ಎಷ್ಟು ಕೋಟಿ ಎಂಬುದು ಗೊತ್ತಿಲ್ಲ. ಪ್ರಯತ್ನವನ್ನಂತೂ ಮಾಡುತ್ತಲೇ ಇರುತ್ತಾರೆ. ಮುಖ್ಯಮಂತ್ರಿಗಳೇ ಕೋಟಿ ವಿಚಾರ ಹೇಳಿದ ಮೇಲೆ ಅದು ಸತ್ಯ ಇರಬಹುದು. ಈ ವಿಚಾರವಾಗಿ ಸರಿಯಾದ ದಾಖಲೆ ಸಿಕ್ಕರೆ ಅದರ ಬಗ್ಗೆಯೂ ತನಿಖೆ ಮಾಡುತ್ತೇವೆ. ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ಎತ್ತಿದ ಕೈ ಎಂದರು.
ಸಿಎಂ ಸಿದ್ದರಾಮಯ್ಯ ಅವರನ್ನು ಕಂಡರೆ ಬಿಜೆಪಿ ಅವರಿಗೆ ಹೊಟ್ಟೆ ಉರಿ. ಹೀಗಾಗಿ ಅವರೇ ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಇಳಿಸಲು ದಿನಾಂಕ ನಿಗದಿ ಮಾಡುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಿಲ್ಲ ಎಂದರು.




