ಬೆಂಗಳೂರು: ಬೆಂಗಳೂರಿನ ಲಕ್ಷ್ಮಿದೇವಿ ನಗರದಲ್ಲಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ದಾಳಿ ನಡೆದಿದೆ. ಈ ಸಂಬಂಧ ಮೂವರು ಕಿಡಿಗೇಡಿಗಳನ್ನು ಬಂಧಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರನ್ನು ಶಾಸಕಿಯಾಗಿಸಬೇಕು ಎಂಬ ಕಾರಣಕ್ಕೆ ಮೊಟ್ಟೆಯಲ್ಲಿ ಆಸಿಡ್ ತುಂಬಿ ಈ ದಾಳಿ ನಡೆಸಲಾಗಿದೆ ಎಂದು ಮುನಿರತ್ನ ಆರೋಪಿಸಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿ ದೇವಿ ನಗರದಲ್ಲಿ ಏರ್ಪಡಿಸಿದ್ದ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೆ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುನಿರತ್ನ ಪಕ್ಷದ ಕಾರ್ಯಕರ್ತರು ಮತ್ತುಅಭಿಮಾನಿಗಳ ಜೊತೆ ನಡೆದುಕೊಂಡು ಹೋಗುತ್ತಿದ್ದರು.
ಈ ವೇಳೆ ಶಾಸಕ ಮುನಿರತ್ನ ಅವರ ತಲೆ ಮೇಲೆ ಏಕಾಏಕಿ ಮೊಟ್ಟೆ ದಾಳಿ ನಡೆದಿದೆ. ಕೂಡಲೇ ಭದ್ರತೆಗಿದ್ದ ಪೊಲೀಸರು ಸುತ್ತುವರೆದು ಅವರನ್ನು ವಾಹನದ ಬಳಿ ಕರೆದುಕೊಂಡು ಹೋಗಿದ್ದಾರೆ. ಅಲ್ಲಿದ್ದ ಅವರ ಕಾರಿನ ಗಾಜಿನ ಮೇಲೆಯೇ ಕಲ್ಲು ಬಿದ್ದಿದೆ.
ಪೊಲೀಸರು ತಕ್ಷಣ ಮಧ್ಯ ಪ್ರವೇಶಿಸಿ ಅಲ್ಲಿ ಗುಂಪು ಸೇರಿದವರನ್ನು ಚದುರಿಸಿ ಮುನಿರತ್ನ ಅವರನ್ನು ಸುರಕ್ಷಿತವಾಗಿ ಕರೆದೊಯ್ದರು.
ತಮ್ಮ ಮೇಲಿನ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಮಾಜಿ ಸಂಸದ ಡಿ ಕೆ ಸುರೇಶ್, ಡಿಸಿಎಂ ಡಿ ಕೆ ಶಿವಕುಮಾರ್ ಕಡೆಯವರಿಂದ ನನ್ನ ಮೇಲೆ ಆಸೀಡ್ ದಾಳಿ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದರು.
ಮೊಟ್ಟೆಯ ಒಳಗಡೆ ಆಸಿಡ್ ಹಾಕಿ ದಾಳಿ ಮಾಡಿದ್ದಾರೆ. ಗುಂಪು ದಾಳಿ ಮಾಡಿ ನನ್ನ ಕೊಲೆ ಮಾಡಲು ಮುಂದಾಗಿದ್ದಾರೆ. ಡಿ ಕೆ ಸುರೇಶ್ ಅವರಿಗೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಬೇಕು ಎಂಬ ಆಸೆಯಿರುವುದರಿಂದ ನನ್ನ ಮೇಲೆ ದಾಳಿ ನಡೆದಿದೆ ಎಂದರು.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿ ಯಾವ ಕಾರಣಕ್ಕೆ ಯಾರು ದಾಳಿ ನಡೆಸಿದ್ದಾರೆ ಎನ್ನುವುದರ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದರು.



