ಕಲಬುರಗಿ: 05 -ಗುಲಬರ್ಗಾ (ಪ.ಜಾ) ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆಯುವ ಸಾರ್ವತ್ರಿಕ ಚುನಾವಣೆಗೆ ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಚುನಾವಣಾ ಅಧಿಸೂಚನೆ ಪ್ರಕಾರ ಏಪ್ರಿಲ್ 12 ರಿಂದ 19ರ ವರೆಗೆ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಥವಾ ಸಹಾಯಕ ಚುನಾವಣಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಬಹುದಾಗಿದೆ.
ಏಪ್ರಿಲ್ 20 ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಏಪ್ರಿಲ್ 22 ರಂದು ಮಧ್ಯಾಹ್ನ 3 ಗಂಟೆ ಒಳಗಾಗಿ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಇನ್ನು ಚುನಾವಣೆಗೆ ಸ್ಫರ್ಧೆ ನಡೆದ ಸಂದರ್ಭದಲ್ಲಿ ಮೇ 7 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.




