ಬೆಂಗಳೂರು: ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ತಾಲೂಕು ಜಿಲ್ಲಾ ಪಂಚಾಯತಿ ಸೇರಿದಂತೆ ನೆನೆಗುದಿಗೆ ಬಿದ್ದಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಪಟ್ಟಿ
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಕುರಿತಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿದ್ದವು. ಈಗ ಅವುಗಳೆಲ್ಲವನ್ನೂ ಬಗೆಹರಿಸಲಾಗುತ್ತಿದ್ದು ಆದಷ್ಟು ಶೀಘ್ರ ಚುನಾವಣೆ ನಡೆಸಲಾಗುವುದು ಎಂದರು.
ಕ್ಷೇತ್ರ ಪುನರ್ವಿಗಂಡಣೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದರು.
ಮತ್ತೊಂದೆಡೆಯಲ್ಲಿ ಜಿಲ್ಲಾ ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಿರುವ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿ ಪ್ರಕಟಿಸದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ. ನ್ಯಾಯಾಲಯದ ಮೂರೇ ಹೋಗಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ.
ಈ ಕುರಿತು ಚುನಾವಣೆ ಆಯೋಗ ಈಗಾಗಲೇ ರಾಜ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಸಮಯದಲ್ಲಿ ರಾಜ್ಯ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿದ್ದು ಒಂದು ತಿಂಗಳಗಾಗಿ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿಯನ್ನು ಚುನಾವಣೆ ಆಯೋಗಕ್ಕೆ ನೀಡುವುದಾಗಿ ಕಳೆದ ಡಿಸೆಂಬರ್ ನಲ್ಲಿ ತಿಳಿಸಿದೆ.
ಆದರೆ ಸರ್ಕಾರ ಇಲ್ಲಿಯವರೆಗೆ ಯಾವುದೇ ಪಟ್ಟಿಯನ್ನು ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಕೋರ್ಟ್ ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಆಯೋಗ ಸಿದ್ದತೆ ನಡೆಸಿದೆ.




