ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಯೋಜನಾ ಸಮಿತಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ 11 ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ನಗರ ಸ್ಥಳೀಯ ಕ್ಷೇತ್ರದಲ್ಲಿ ಒಟ್ಟು 168 ಮತದಾರರು ಇದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ಕಾರ್ಯಗಳು ನಡೆಯಲಿವೆ ಎಂದು ಜಿ.ಪಂ.ಸಿಇಓ ಡಾ.ಆಕಾಶ್ ತಿಳಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಅಕ್ಟೋಬರ್ 14 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದೆ. ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರ ಸಲ್ಲಿಸಲು ಕಾಲ ನಿಗದಿಪಡಿಸಲಾಗಿದೆ. ಅಕ್ಟೋಬರ್ 18 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.
ಅಕ್ಟೋಬರ್ 24 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಅಕ್ಟೋಬರ್ 28 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಬಹುದು.
ಅಕ್ಟೋಬರ್ 29 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 4 ಗಂಟೆಯ ರವರೆಗೆ ಚುನಾವಣೆಗೆ ಮತದಾನ ನಡೆಯಲಿದೆ. ಅಂದು ಸಂಜೆ 5 ಗಂಟೆಯ ನಂತರ ಮತ ಎಣಿಕೆ ನಡೆಸಲಾಗುವುದು. ಬಳಿಕ ಫಲಿತಾಂಶ ಘೋಷಿಸಿ ಚುನಾವಣೆ ಕಾರ್ಯಗಳನ್ನು ಪೂರ್ಣಗೊಳಿಸಲಾಗುವುದು.




