ಬೆಂಗಳೂರು: ಸಂಸದರಾಗಿ ಆಯ್ಕೆಯಾದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಳ್ಳಾರಿ ಸಂಸದರಾಗಿ ಆಯ್ಕೆಯಾಗಿರುವ ಇ ತುಕಾರಾಂ ಅವರ ರಾಜೀನಾಮೆಯಿಂದ ತೆರವಾದ ವಿಧಾನಸಭೆಯ ಮೂರು ಸ್ಥಾನಗಳಿಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ರಾಮನಗರ ಜಿಲ್ಲೆಯ ಚನ್ನಪಟ್ಟಣ, ವಿಜಯನಗರ ಜಿಲ್ಲೆಯ ಸಂಡೂರು ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 13ರಂದು ನಡೆಸಲಾಗುವುದು ಎಂದು ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಅಕ್ಟೋಬರ್ 18ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಅ.25ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಅ. 28ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಅ.30ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ ಎಂದು ತಿಳಿಸಿದ್ದಾರೆ.




