ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ ಅವರನ್ನು ಮುಂದುವರಿಸಲು ತೀವ್ರ ವಿರೋಧ ವ್ಯಕ್ತಪಡಿಸಿರುವ ಭಿನ್ನರ ಬಣ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಘೋಷಣೆ ಮಾಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮತ್ತೊಂದೆಡೆ ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಲು ಕೋರ್ ಕಮಿಟಿ ಸಭೆ ಆಯೋಜಿಸಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರವಾಲ್, ತಮಿಳುನಾಡಿನಿಂದ ಪೊನ್ ರಾಧಾಕೃಷ್ಣನ್, ರಾಜ್ಯದ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಬೆಂಗಳೂರಿಗೆ ಬರಲಿದ್ದಾರೆ.
ಕೋರ್ ಕಮಿಟಿ ಸಭೆ ಬಗ್ಗೆ ಮಾಹಿತಿ ನೀಡಿರುವ ಪಕ್ಷದ ಅಧ್ಯಕ್ಷ ವಿಜಯೇಂದ್ರ, ಮಧ್ಯಾಹ್ನ 3ಕ್ಕೆ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರನ್ನು ಒಳಗೊಂಡ ನಮ್ಮ ಚುನಾಯಿತ ಪ್ರತಿನಿಧಿಗಳ ಸಭೆ ನಡೆಯಲಿದೆ ಎಂದರು.
ಪಕ್ಷದ ರಾಜ್ಯಾಧ್ಯಕ್ಷರ ಚುನಾವಣೆ ಕುರಿತಂತೆ ಉಸ್ತುವಾರಿ ನಾಯಕರು ಸಭೆಯಲ್ಲಿ ಅಭಿಪ್ರಾಯ ಪಡೆಯಲಿದ್ದಾರೆ. ಸಂಘಟನೆ ಸಂಬಂಧ ಚರ್ಚಿಸಲಿದ್ದಾರೆ ಎಂದರು.
ಸಂಜೆ 4ಕ್ಕೆ ರಾಜ್ಯದಲ್ಲಿ ನಡೆಯುತ್ತಿರುವ ಸಂಘಟನಾ ಪರ್ವದ ಕುರಿತು ಚರ್ಚೆ ನಡೆಸಲಿದ್ದಾರೆ. ಮಂಡಲ ಅಧ್ಯಕ್ಷರ ಚುನಾವಣೆ ನಡೆದಿದೆ. ಜಿಲ್ಲಾಧ್ಯಕ್ಷರ ನಿಯೋಜನೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಕೂಡ ಚರ್ಚೆ ನಡೆಯಲಿದೆ. ಪಕ್ಷದ ಚುನಾವಣಾ ಅಧಿಕಾರಿಗಳು, ಸಹ ಅಧಿಕಾರಿಗಳು, 13 ಜನ ಮೇಲ್ವಿಚಾರಕರ ಸಭೆಯೂ ನಡೆಯಲಿದೆ ಎಂದರು.
ಈ 3 ಸಭೆಗಳಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಸಲಿದ್ದಾರೆ. ರಾಜ್ಯದ ಪರಿಸ್ಥಿತಿ, ಸಂಘಟನಾ ವಿಚಾರವಾಗಿ, ರಾಜ್ಯದ ಅಧ್ಯಕ್ಷರ ವಿಚಾರವಾಗಿ ಎಲ್ಲವೂ ಕೂಡ ಸಮಗ್ರವಾಗಿ ಚರ್ಚೆ ಆಗಲಿದೆ ಎಂದರು.
ಈ ನಡುವೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ವಿಜಯೇಂದ್ರ ಅವಿರೋಧವಾಗಿ ಆಯ್ಕೆಯಾಗಲು ಸಾಧ್ಯವಿಲ್ಲ. ಅವರ ವಿರುದ್ಧ ನಮ್ಮ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದರು.
ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗಲೇಬೇಕು. ಹೀಗಾಗಿ ಶಾಸಕ ರಮೇಶ ಜಾರಕಿಹೊಳಿ ಅವರ ಜೊತೆ ಚರ್ಚಿಸಿ, ನಮ್ಮ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಲವು ಕಡತಗಳಿಗೆ ವಿಜಯೇಂದ್ರ ಅವರೇ ಯಡಿಯೂರಪ್ಪ ಅವರ ನಕಲಿ ಸಹಿ ಮಾಡಿದ್ದಾರೆ. ಇದರ ಬಗ್ಗೆ ತನಿಖೆಯಾಗಲಿ. ನಕಲಿ ಸಹಿ ಮಾಡಿರುವ ವ್ಯಕ್ತಿಯನ್ನು ಪಕ್ಷದ ಅಧ್ಯಕ್ಷ ಅಥವಾ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬಹುದೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.




