ಅನೇಕ ದೇಶಗಳ ಚುನಾವಣೆಗಳು ಬ್ಯಾಲೆಟ್ ಪೇಪರ್ ನಲ್ಲಿಯೇ ನಡೆಯುತ್ತಿವೆ: ಸಿದ್ದರಾಮಯ್ಯ

1 year ago

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ನಡೆಯಲಿರುವ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕವೇ ನಡೆಸಲು ಕೈಗೊಂಡಿರುವ ತೀರ್ಮಾನವನ್ನು ಬಲವಾಗಿ ಸಮರ್ಥಿಸಿರುವ ಸಿಎಂ ಸಿದ್ದರಾಮಯ್ಯ, ನಮ್ಮ ಅನುಭವದ ಆಧಾರದ ಮೇಲೆ ಇಂತಹ ನಿರ್ಧಾರ ಕೈಗೊಂಡಿದ್ದೇವೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ದೇಶಗಳು ಭಾರತದ ಮಾದರಿಯಲ್ಲಿಯೇ ಇವಿಎಂ ಬಳಸಿ ಇದೀಗ ಮತ್ತೆ ಬ್ಯಾಲೆಟ್ ಪೇಪರ್ ಯುಗಕ್ಕೆ ಮರಳಿವೆ. ಅಲ್ಲಿಯ ಚುನಾವಣೆಗಳು ಬ್ಯಾಲೆಟ್ ಪೇಪರ್ ನಲ್ಲಿಯೇ ನಡೆಯುತ್ತಿವೆ ಎಂದರು.

ರಾಜ್ಯ ಸರ್ಕಾರ ಈ ವಿಚಾರವಾಗಿ ಸಾಕಷ್ಟು ಅಧ್ಯಯನ ಮತ್ತು ಅನುಭವ ಓರೆಗೆ ಹಚ್ಚಿ ತೀರ್ಮಾನ ಕೈಗೊಂಡಿದೆ. ಇದರಿಂದ ಮುಕ್ತ ಹಾಗೂ ಪಾರದರ್ಶಕ ಚುನಾವಣೆಗಳು ನಡೆಯಲಿವೆ ಎಂದರು.

Leave a Reply