ಬೆಂಗಳೂರು: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್)ನಲ್ಲಿ ಸೆಕ್ಯೂರಿಟಿ ಗಾರ್ಡ್ ಮತ್ತು ಫೈರ್‍ಮೆನ್ ಹುದ್ದೆಗಳಿಗೆ ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುಕೊಳ್ಳುತ್ತಿದ್ದು, ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.26 ಅರ್ಜಿ ಸಲ್ಲಿಸಲು ಕೊನೆಯ ದಿನ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನೇಮಕಾತಿಯು ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೆರಿಟ್ ಆಧಾರದಲ್ಲಿ ನಡೆಯುವುದು. ಆಯ್ಕೆಯಾದವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆಯ್ಕೆಯಾದವರಿಗೆ ರೂ.21000/-ಗಳ ಮೂಲ ವೇತನವಿದ್ದು, ತುಟ್ಟಿ ಭತ್ಯೆ ಹಾಗೂ ಇತರೆ ಭತ್ಯೆಗಳು ಕೂಡ ಲಭ್ಯವಿದೆ.
ಮಾಜಿ ಸೈನಿಕರು ನಿಗದಿತ ನಮೂನೆಯ ಅರ್ಜಿಯನ್ನು ಇದೇ ಡಿಸೆಂಬರ್ 26ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಿ, ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08182-220982 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.




